ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಧಾರವಾಡ ಜಿಲ್ಲೆಯ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ
Congratulatory program for athletes from Dharwad district who participated in national level sports
ಧಾರವಾಡ ಫೆ.13: ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾರಣ್ಯ ಪದವಿ ಪೂರ್ವ ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ 2025-26ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಧಾರವಾಡ ಜಿಲ್ಲೆಯ ಕ್ರೀಡಾಪಟುಗಳಿಗೆ ಫೆಬ್ರವರಿ 09, 2026 ರಂದು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಡಾ. ಶರಣಮ್ಮ ಗೊರೆಬಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿ, ಕ್ರೀಡೆ ನಮ್ಮನ್ನು ಆರೋಗ್ಯವಂತರನ್ನಾಗಿ ಮಾಡುತ್ತದೆ. ಅಧ್ಯಯನದ ಜೊತೆಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಅತ್ಯಂತಮುಖ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಡಾ. ತೇಜಸ್ವಿನಿ ನಾರಾಯಣಕರ ಅವರು ಮಾತನಾಡಿ, ಕ್ರೀಡೆಗಳು ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ನಮ್ಮ ಕ್ರೀಡಾಪಟುಗಳು ಧಾರವಾಡ ಜಿಲ್ಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಪ್ರಖ್ಯಾತಿಗೊಳಿಸಿದ್ದು ಅತ್ಯಂತ ಸಂತಸದ ಹಾಗೂ ಸ್ಪೂರ್ತಿದಾಯಕ ವಿಷಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಸಲ್ಲಿಸಿದರು. ವಿದ್ಯಾರ್ಥಿನಿ ಜ್ಯೋತಿ ಚೋಳಿನ್ ನಿರೂಪಿಸಿದರು. ಈರಣ್ಣ ಹುಬ್ಬಳ್ಳಿ ಅವರ ವಂದಿಸಿದರು. ಈ ಸಂದರ್ಭದಲ್ಲಿ ಆದರ್ಶ ಕಾಲೇಜಿನ ಪ್ರಾಚಾರ್ಯ ನಂದೀಶ ಕಾಖಂಡಕಿ, ಜಿಲ್ಲಾ ಅಧ್ಯಕ್ಷರು ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಈರಣ್ಣ ಹುಬ್ಬಳ್ಳಿ, ದೈಹಿಕ ಶಿಕ್ಷಣ ಉಪನ್ಯಾಸಕ ರಾಜಶೇಖರ ಬಿ ಚೌಹಾಣ, ನಿಖಿಲ್ ಸಾಳುಂಕೆ ಹಾಗೂ ವಿಜೇತ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 