ನವದೆಹಲಿ, ಜೂನ್ 27: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಆದರೆ, ಅವರಲ್ಲಿ ಕೊರೊನಾ ಲಕ್ಷಣಗಳು ಅತ್ಯಲ್ಪ ಪ್ರಮಾಣದಲ್ಲಿವೆ ವೈದ್ಯರು ಹೇಳಿದ್ದಾರೆ.ಸಿಂಘ್ವಿ ಅವರ ಕಾರ್ಯಾಲಯದಲ್ಲಿದ್ದ ಎಲ್ಲ ಸಿಬ್ಬಂದಿಗೂ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಎಲ್ಲರಲ್ಲೂ ನೆಗೆಟಿವ್ ವರದಿ ಕಂಡುಬಂದಿದೆ. ಇದರಿಂದ ಜುಲೈ ೯ರವರೆಗೆ ಹೋಂ ಐಸೋಲೇಷನ್ ನಲ್ಲಿ ಇರುವಂತೆ ವೈದ್ಯರು ಸಿಂಘ್ವಿ ಅವರಿಗೆ ಸೂಚಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ನಾಯಕ ಸಂಜಯ್ ಝಾ ಅವರಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿತ್ತು.