ಕಾಂಗ್ರೆಸ್ ನಿಂದ ರೈತ ವಿರೋಧಿ ನೀತಿ: ಶಾಸಕ ಕೃಷ್ಣ ನಾಯಕ್
Congress has anti-farmer policy: MLA Krishna Nayak
ಕಾಂಗ್ರೆಸ್ ನಿಂದ ರೈತ ವಿರೋಧಿ ನೀತಿ: ಶಾಸಕ ಕೃಷ್ಣ ನಾಯಕ್
ಹೂವಿನಹಡಗಲಿ 04: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಸಿಗುವ ಯೋಜನೆಗಳನ್ನು ರದ್ದುಪಡಿಸಿ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶಾಸಕ ಕೃಷ್ಣನಾಯ್ಕ ಆರೋಪಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಪ್ರಗತಿಯ ಇಲ್ಲದೇ . ಬೆಲೆ ಏರಿಕೆಯು ಗಗನಕ್ಕೇರಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಈ ಸರ್ಕಾರ ಕೇವಲ ಪೊಳ್ಳು ಭಾಷಣ ಮತ್ತು ಆರೋಪ-ಪ್ರತ್ಯಾರೋಪಗಳಲ್ಲಿ ಕಾಲ ಕಳೆಯುತ್ತಿದೆ. ಜನರ ಕಷ್ಟಗಳಿಗೆ ಸ್ಪಂದಿಸದೆ, ಅಭಿವೃದ್ಧಿಯನ್ನು ಮರೆತು, ಕೇವಲ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಈ ವರ್ತನೆಗೆ ಮುಂದಿನ ದಿನ ತಕ್ಕ ಪಾಠ ಕಲಿಸಲಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ ದಕ್ಷಿಣ ಕನ್ನಡ.ಹುಬ್ಬಳ್ಳಿ. ಭೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸಚಿವರ ದೌರ್ಜನ್ಯ ಗಳ ಜತೆಗೆ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳು ಇದಕ್ಕೆ ಸಾಕ್ಷಿಯಾಗಿವೆ. ಆಡಳಿತ ಯಂತ್ರವು ರಾಜ್ಯ ಸರ್ಕಾರದ ಕೈಗೊಂಬೆಯಾಗಿದೆ. ಎಂದು ಶಾಸಕರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ.ಬಿಜೆಪಿ ಜಿಲ್ಲಾದ್ಯಕ್ಷ ಸಂಜೀವರೆಡ್ಡಿ. ತಾಲೂಕು ಅದ್ಯಕ್ಷ ಮಲ್ಲಿಕಾರ್ಜುನ.ಈಟಿ.ಲಿಂಗರಾಜ. ಮುಖಂಡರಾದ ಬೀರಬ್ಬಿ ಬಸವರಾಜ. ಪುತ್ರೇಶ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 