ಕಾಂಗ್ರೆಸ್ ಭಾರತದ ಆತ್ಮ: ರಾಹುಲ್ ಗಾಂಧಿ
Congress is the soul of India: Rahul Gandhi
ನವದೆಹಲಿ: 'ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷ ಅಲ್ಲ, ಭಾರತದ ಆತ್ಮ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ಕಾಂಗ್ರೆಸ್ನ 140ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ಕುರಿತು ಮಾತನಾಡಿದ್ದಾರೆ. 'ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಲ್ಲ. ಬದಲಾಗಿ ದುರ್ಬಲ, ವಂಚಿತ ಮತ್ತು ಶ್ರಮಿಕರೊಂದಿಗೆ ನಿಂತಿರುವ ಭಾರತದ ಆತ್ಮದ ಧ್ವನಿಯಾಗಿದೆ' ಎಂದು ರಾಹುಲ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲೂ ರಾಹುಲ್ ಪೋಸ್ಟ್ ಮಾಡಿದ್ದು, 'ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ಸಂವಿಧಾನಕ್ಕೆ ಅಡಿಪಾಯ ಹಾಕಿಕೊಟ್ಟ, ಪ್ರಜಾಪ್ರಭುತ್ವ, ಜಾತ್ಯತೀತತೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಮೌಲ್ಯಗಳನ್ನು ಬಲಪಡಿಸಿದ ಮಹಾನ್ ತ್ಯಾಗಿಗಳಿಗೆ ನಾವು ಗೌರವ ನಮನ ಸಲ್ಲಿಸುತ್ತೇವೆ' ಎಂದು ಬರೆದುಕೊಂಡಿದ್ದಾರೆ.'ಸತ್ಯಕ್ಕಾಗಿ ಮತ್ತು ದ್ವೇಷ, ಅನ್ಯಾಯ, ಸರ್ವಾಧಿಕಾರದ ವಿರುದ್ಧ ಸಂವಿಧಾನವನ್ನು ರಕ್ಷಿಸಲು ಇನ್ನಷ್ಟು ಪ್ರಬಲವಾಗಿ ಹೋರಾಡುವ ಸಂಕಲ್ಪವನ್ನು ಹೊಂದಿದ್ದೇವೆ' ಎಂದು ಹೇಳಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 