ನಾಳೆ ಕಾಂಗ್ರೆಸ್ ಜೆಡಿಎಸ್ ಮುಖಂಡರ ಸಭೆ
ಲೋಕದರ್ಶನವರದಿ
ಕುಂದಗೋಳ 11: ಕುಂದಗೋಳ ವಿಧಾನ ಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯಥರ್ಿಯಾಗಿ ಸ್ಪಧರ್ಿಸಿರುವ ಪೌರಾಡಳಿತ ಸಚಿವ ದಿ. ಸಿ.ಎಸ್. ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಅವರ ಪರ ಚುನಾವಣಾ ಪ್ರಚಾರ ನಡೆಸಲು ಮೇ 13 ರಂದು ಕುಂದಗೋಳಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಗಮಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಶನಿವಾರ ಕುಂದಗೋಳ ಪಟ್ಟಣದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದಶರ್ಿ ಎನ್.ಹೆಚ್. ಕೋನರಡ್ಡಿ ಹಾಗೂ ಮಾಜಿ ಸಚಿವ ವಿನಯ ಕುಲಕಣರ್ಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಪೂರ್ವಭಾವಿ ನಡೆಯಿತು. ಕಾಂಗ್ರೆಸ್ ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ಸಭೆಗೆ ಕೈಗೊಳ್ಳಬೇಕಾದ ಅಗತ್ಯ ಸಿದ್ದತೆ ಹಾಗೂ ಮೈತ್ರಿ ಸಮಾವೇಶದ ಯಶಸ್ವಿ ಕುರಿತು ಚಚರ್ಿಸಿದರು.
ಮೇ. 13ರಂದು ಸೋಮವಾರ ಸಂಜೆ 5 ಗಂಟೆಗೆ ಕುಂದಗೋಳದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡ ನಂತರ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾತ್ರಿ 7 ಗಂಟೆಗೆ ಕುಂದಗೋಳ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹುಬ್ಬಳ್ಳಿ ತಾಲೂಕಿನ ವರೂರು ನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಈ ಎರಡು ಸಮಾವೇಶಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮ್ಮೀಶ್ರ ಸರಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಉಭಯ ಪಕ್ಷಗಳ ನಾಯಕರು ಮನವಿ ಮಾಡಿದರು.
ಈಗಾಗಲೇ ರಾಜ್ಯದ ಗಮನ ಸೆಳೆದಿರುವ ಕುಂದಗೋಳ ವಿಧಾನ ಸಭಾ ಉಪಚುನಾವಣೆಯನ್ನು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಸವಾಲ್ ಆಗಿ ಸ್ವೀಕರಿಸಿದ್ದು, ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಜೊತೆಗೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯಥರ್ಿ ಕುಸುಮಾ ಶಿವಳ್ಳಿ ಗೆಲ್ಲಿಸಲು ಕಂಕಣ ಬದ್ದ ರಾಗಬೇಕು ಎಂದು ಕರೆ ನೀಡಿದರು.
ಈ ಸಭೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅರವಿಂದ ಕಟಗಿ, ಮಾಜಿ ಶಾಸಕ ಎಂ.ಎಸ್. ಅಕ್ಕಿ, ಜೆಡಿಎಸ್ ಮುಖಂಡ ಹಜರತ್ ಅಲಿ ಜೋಡಮನಿ, ಜಿಪಂ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜೆಡಿಎಸ್ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡು ತಮ್ಮ ಸಲಹೆ ಸೂಚನೆ ನೀಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 