ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ
ಹಾವೇರಿ 11: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೇಸ್ ಪಕ್ಷ ಉತ್ತಮ ಫಲಿತಾಂಶ ಬಂದ ಹಿನ್ನಲೆಯಲ್ಲಿ ಹಾವೇರಿ ಜಿಲ್ಲಾ ಕೇಂದ್ರ ಸಿದ್ದಪ್ಪ ಸರ್ಕಲಿನಲ್ಲಿ ಕಾಂಗ್ರೇಸ್ ಪಕ್ಷದ ಜಿಲ್ಲಾ ಘಟಕ ಹಾಗೂ ವಿವಿಧ ಘಟಕಗಳ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು. ಕೆಪಿಸಿಸಿ ಕಾರ್ಯದಶರ್ಿ ಎಸ್ಎಫ್ಎನ್ ಗಾಜೀಗೌಡ್ರ ಮಾತನಾಡಿ ದೇಶದಲ್ಲಿ ಬಿಜೆಪಿ ವಿರೋಧಿ ಅಲೆಯ ಬದಲಾವಣೆಯ ಗಾಳಿ ಬೀಸಿದೆ. 2014 ರಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಬಿಜೆಪಿಯ ಪ್ರಧಾನ ಮೋದಿ ಸಕರ್ಾರ ಈಡೇರಿಸದೇ ಕೇವಲ ಮಾತನಾಡುವ ಮೂಲಕ ಅವುಗಳಿಗೆ ತಿಲಾಂಜಲಿ ನೀಡಲಾಗಿದೆ. ದೇಶದ ಆಡಳಿತ ನಡೆಸುವಲ್ಲಿ ಕೇಂದ್ರ ಸಕರ್ಾರ ವಿಫಲವಾಗಿದೆ. ಮತ್ತೆ ಕೇಂದ್ರದಲ್ಲಿ ಕಾಂಗ್ರೇಸ್ ಸಕರ್ಾರ ಬರಬೇಕು ಎಂದು ಜನರು ಬಯಸುತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮನೆ ಸೇರಲಿದೆ ಎಂದು ಕೇಂದ್ರ ಸಕರ್ಾರದ ವಿರುದ್ಧ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ. ಮುಖಂಡರಾದ ಕೊಟ್ರೇಶಪ್ಪ ಬಸೇಗಣ್ಣಿ. ಸಂಜೀವಕುಮಾರ ನೀರಲಗಿ.ಎಂಎಂ ಹಿರೇಮಠ.ಎಂಎಂ ಮೈದೂರ.ಸಚಿನ ಡಂಬಳ.ಜಮೀರಹ್ಮದ ಎಂ ಜಿಗರಿ ಸೇರಿದಂತೆ ಕಾಂಗ್ರೇಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 