ನ್ಯಾಯಾಲಯಗಳಿಗೆ ನಿರಂತರ ಬಾಂಬ್ ಬೆದರಿಕೆ ಹಿ ಆತಂಕಕಾರಿ ಬೆಳವಣಿಗೆ ಕ್ರಮಕ್ಕೆ ಆಗ್ರಹ
Constant bomb threats to courts, alarming development, calls for action
ಲೋಕದರ್ಶನ ವರದಿ
ಹಾವೇರಿ 29: ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ನಿರಂತರವಾಗಿ ಬರುತ್ತಿರುವುದು ಸಾರ್ವಜನಿಕರಲ್ಲಿ ಭಯ ಮತ್ತು ಆತಂಕವನ್ನು ಉಂಟುಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬೆದರಿಕೆ ಕರೆಗಳು ಮತ್ತು ಇಮೇಲ್ಗಳ ಮೂಲವನ್ನು ಪತ್ತೆಹಚ್ಚುವಲ್ಲಿ ತಕ್ಷಣ ಹಾಗೂ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ರಾಜ್ಯ ಕಾರ್ಯದರ್ಶಿ ಬಸ್ವರಾಜ್ ಪೂಜಾರ್ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನ್ಯಾಯಾಲಯಕ್ಕೆ ಮೂರನೇ ಬಾರಿಗೆ ಬಾಂಬ್ ಬೆದರಿಕೆ ಕರೆ/ಇಮೇಲ್ ಬಂದಿದೆ ಎಂದು ತಿಳಿಸಿದ್ದಾರೆ. ಹಿಂದೆ ನಡೆದಿರುವ ದುಷ್ಕೃತ್ಯಗಳ ಹಿನ್ನೆಲೆಯನ್ನು ತನಿಖೆಯ ಮೂಲಕ ಪತ್ತೆಹಚ್ಚಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ರೀತಿಯ ನಿರಂತರ ಬೆದರಿಕೆಗಳಿಂದ ನ್ಯಾಯಾಲಯದ ವಾತಾವರಣದಲ್ಲಿ ಆತಂಕ ನಿರ್ಮಾಣವಾಗುತ್ತಿದ್ದು, ಕೋರ್ಟ್ ಕಲಾಪಗಳು ಕೆಲವೊಮ್ಮೆ ಸ್ಥಗಿತಗೊಳ್ಳುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯ ಸಿಬ್ಬಂದಿ ಹೊರಗೆ ಓಡಿ ಹೋಗುವಂತಹ ಭೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 