ಗದಗ 06: ಜಿಲ್ಲೆಯಲ್ಲಿ ಸತತ ಮಳೆ ಆಗುತ್ತಿರುವ ಈ ಸಂದರ್ಭದಲ್ಲಿ ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರು ಜಾಗೃತಿಯಿಂದ ಕಾರ್ಯನಿರ್ವಹಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ನಿಗಾವಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ವಿರೂಪಾಕ್ಷಪ್ಪ ರೆಡ್ಡಿ ಮಾದಿನೂರ ಸೂಚಿಸಿದರು.
ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ಜಿಲ್ಲೆಯಲ್ಲಿಯ ಅತೀವೃಷ್ಟಿ ಹಾಗೂ ಅನಾವೃಷ್ಟಿ ಕುರಿತು ಜರುಗಿದ ಜಿಲ್ಲೆಯ ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರ ತುತರ್ು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ಅಗತ್ಯದ ಕ್ರಮ ಜರುಗಿಸಲು ಸೂಚಿಸಿದರು. ಮಳೆಗಾಲದ ಈ ಸಂದರ್ಭದಲ್ಲಿ ನೀರು ಹಾಗೂ ಸುತ್ತಮುತ್ತಲಿನ ವಾತಾವರಣ ಕಲುಷಿತಗೊಳ್ಳದಂತೆ ಸ್ವಚ್ಛವಾಗಿಟ್ಟುಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯದ ಮುನ್ನೆಚ್ಚರಿಕೆ ಕ್ರಮ ಜರುಗಿಸಲು ವಿರೂಪಾಕ್ಷ ರೆಡ್ಡಿ ಮಾದಿನೂರ ಸೂಚಿಸಿದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಬಿ.ಎಮ್. ಗೋಜನೂರು ಮಾತನಾಡಿ ಮಳೆಗಾಲದಲ್ಲಿ ಕುಲಷಿತ ನೀರಿನಿಂದ ಮಲೇರಿಯಾ, ಡೆಂಗೀ ಜ್ವರ ಹರಡುವ ಸಂಭವವಿದ್ದು ಈ ಕುರಿತು ಸಾರ್ವಜನಿಕರಲ್ಲಿ ಅಗತ್ಯದ ಜಾಗೃತಿ ಮೂಡಿಸುವದರ ಜೊತೆಗೆ ತಾಲೂಕು ಹಾಗೂ ಗ್ರಾಮ ಪಂಚಾಯತ ಮಟ್ಟದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಹಾಗೂ ಸ್ವಚ್ಛ ಕುಡಿಯುವ ನೀರನ್ನು ಬಳಸುವಂತೆ ಜಾಗೃತಿ ಮೂಡಿಸಲು ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕತರ್ೆಯರಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ.ಎಚ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ, ಜಿಲ್ಲಾ ಪುರುಷ ಹಾಗೂ ಮಹಿಳಾ ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತರು, ಸಭೆಯಲ್ಲಿ ಭಾಗವಹಿಸಿದ್ದರು.