ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
Constitution Day celebration at Government First Class College
ಕಂಪ್ಲಿ 28: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ರಾಜ್ಯ ಶಾಸ್ತ್ರ ವಿಭಾಗದಿಂದ ಸಂವಿಧಾನ ದಿನವನ್ನು ಆಚರಣೆ ಮಾಡಲಾಯಿತು.ಕಾಲೇಜಿನ ಪ್ರಾಚಾರ್ಯ ಡಾ.ಶ್ರೀನಿವಾಸರೆಡ್ಡಿ ವಿದ್ಯಾರ್ಥಿಗಳಿಗೆ ಜಗತ್ತಿಗೇ ಮಾದರಿಯಾದ ನಮ್ಮ ಸಂವಿಧಾನದ ಮಹತ್ವವನ್ನು ತಿಳಿಸುತ್ತಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸಿದರು. ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಜ್ಮಾ ಟಿ.ಎಂ.ಆರ್. ಭಾರತ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿ ಮಾತನಾಡಿ, ಜನ ಸಾಮಾನ್ಯರಲ್ಲಿ ಭಾರತದ ಸಂವಿಧಾನದ ಮಹತ್ವವನ್ನು ಕುರಿತು ಅರಿವು ಮೂಡಿಸುವುದಕ್ಕಾಗಿ ದಿ.ನ.26ರಿಂದ ನ.30 ರವರೆಗೆ ಆಯೋಜಿಸಿರುವ ಆನ್‌ಲೈನ್ ರಸಪ್ರಶ್ನೆ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಿ ಇ-ಪ್ರಮಾಣ ಪತ್ರವನ್ನು ಪಡೆಯಬಹುದೆಂದರು. ಕಾರ್ಯಕ್ರಮದಲ್ಲಿ ಸಮಾಜ ಶಾಸ್ತ್ರ ಮುಖ್ಯಸ್ಥರಾದ ಡಾ.ಚಂದ್ರಶೇಖರ್.ಬಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಮಹೇಶ್, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಅನ್ನಪೂರ್ಣ ಗುಡದೂರು, ಗ್ರಂಥಪಾಲಕರಾದ ಎ.ಜಿ.ವೀರಭದ್ರ್ಪ, ಅಧೀಕ್ಷಕರಾದ ನಾಗಮ್ಮ, ಪ್ರಥಮ ದರ್ಜೆ ಸಹಾಯಕರಾದ ಸಹಾಯಕರಾದ ಸಿದ್ಧರೂಢ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 