ನವೆಂಬರ 26 ರಂದು ಸಂವಿಧಾನ ದಿನಾಚರಣೆ

ಡಾ.ಬಿ. ಆರ್‌. ಅಂಬೇಡ್ಕರ್ ಅವರ ಹೋರಾಟದ ಹಾದಿಯ ಕುರಿತು ರಂಗನಾಥ್ ಬತ್ತಾಸಿ ಅವರ ತಂಡದಿಂದ ನೃತ್ಯರೂಪಕ ಪ್ರದರ್ಶನಗೊಳ್ಳಲ

ನವೆಂಬರ 26 ರಂದು ಸಂವಿಧಾನ ದಿನಾಚರಣೆ 

ವಿಜಯಪುರ 25 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ 26 ರಂದು ಸಂವಿಧಾನ ದಿನಾಚರಣೆ ಹಾಗೂ ವಿಚಾರ ಸಂಕಿರಣ -2024 ಕಾರ್ಯಕ್ರಮ ಹಾಗೂ ಡಾ. ಬಿ.ಆರ್‌. ಅಂಬೇಡ್ಕರ್ ರವರ ಜೀವನದ ಪ್ರಮುಖ ಘಟ್ಟಗಳ ಕುರಿತಾಗಿರುವ ಛಾಯಚಿತ್ರಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.  

ಅಂದು ಬೆಳಿಗ್ಗೆ 9.30ಕ್ಕೆ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಭಾರತದ ಸಂವಿಧಾನ ಜಾಗೃತಿ ಜಾಥ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.  

ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್‌ ಮತ್ತು ಡಿಟಜೆಂರ್ಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್‌. ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಶ್ರೀಮತಿ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 

ಈ ಕಾರ್ಯಕ್ರಮದ ಕುರಿತು ವಿಜಯಪುರದ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರು ಹಾಗೂ ಹಿರಿಯ ಸಾಹಿತಿಗಳಾದ ಡಾ. ಎಚ್‌.ಟಿ. ಪೋತೆ ಆಶಯ ನುಡಿಗಳನ್ನಾಡಲಿದ್ದಾರೆ. 

ವೇದಿಕೆ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಕುರಿತು ವಿಚಾರ ಸಂಕಿರಣ ಹಮ್ಮಿಕೊಂಡಿದ್ದು, ಭಾರತ ಸಂವಿಧಾನದ ಹೆಜ್ಜೆಗಳು ಕುರಿತಾಗಿ ಕೂಡಗಿ ಸರ್ಕಾರಿ ಪದವು ಪೂರ್ವ ಮಹಾವಿದ್ಯಾಲಯ ಉಪನ್ಯಾಸಕರಾದ ಬಸವರಾಜ ಜಾಲವಾದ ವಿಷಯ ಮಂಡನೆ ಮಾಡಲಿದ್ದಾರೆ. ಭಾರತದ ಸಂವಿಧಾನದ ಪ್ರಸ್ತಾವನೆ ಆಶಯಗಳ ಕುರಿತು ಲಚ್ಯಾಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಭೀಮರಾವ ಗೊಣಸಗಿ ಅವರು ವಿಷಯ ಮಂಡನೆ ಮಾಡಲಿದ್ದಾರೆ. ಈ ಗೋಷ್ಠಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆ ವಹಿಸಲಿದ್ದಾರೆ. 

ಸಂವಿಧಾನದ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು ಹಾಗೂ ಕಲ್ಯಾಣ ರಾಜ್ಯದ ಪರಿಕಲ್ಪನೆ ವಿಷಯದ ಕುರಿತು ವಿಜಯಪುರದ ನ್ಯಾಯವಾದಿಗಳ ಸಂಘದ ಗೌರವ ಕಾರ್ಯದರ್ಶಿಗಳಾದ ಸುರೇಶ ಚೂರಿ ವಿಷಯ ಮಂಡನೆ ಮಾಡಲಿದ್ದಾರೆ.  ಸಂವಿಧಾನ ಅಂದು ಮತ್ತು ಮುಂದು ವಿಷಯದ ಕುರಿತು ತಾಳಿಕೋಟೆಯ ಎಸ್ ಕೆ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ.ಸುಜಾತ ಚಲವಾದಿ ವಿಷಯ ಮಂಡನೆ ಮಾಡಲಿದ್ದಾರೆ. ಈ ಗೋಷ್ಠಿಯ ಅಧ್ಯಕ್ಷತೆಯನ್ನು ವಿಜಯಪೂರದ ಸಹಕಾರಿ ಇಲಾಖೆಯ ನಿವೃತ್ತ ಉಪ ನಿರ್ದೇಶಕರಾದ ಬಿ. ಆರ್ ಬನಸೋಡೆ ಅಧ್ಯಕ್ಷತೆ ವಹಿಸಲಿದ್ದಾರೆ.  

ಕಾರ್ಯಕ್ರಮದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಹಾಗೂ ಸಂವಿಧಾನದ ಕುರಿತು ಗಾಯನ ಕಾರ್ಯಕ್ರಮ, ಡಾ.ಬಿ. ಆರ್‌. ಅಂಬೇಡ್ಕರ್ ಅವರ ಹೋರಾಟದ ಹಾದಿಯ ಕುರಿತು ರಂಗನಾಥ್ ಬತ್ತಾಸಿ ಅವರ ತಂಡದಿಂದ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.