ಸಂವಿಧಾನ ಮತ್ತು ವಿಕಸಿತ ಭಾರತ ದಿನಾಚರಣೆಸಂವಿಧಾನದಿಂದ ಸಮಾನತೆಯ ಜೀವನ: ತಹಶೀಲ್ದಾರ ನರಸಪ್ಪ

ಸಂವಿಧಾನ ಮತ್ತು ವಿಕಸಿತ ಭಾರತ ದಿನಾಚರಣೆಸಂವಿಧಾನದಿಂದ ಸಮಾನತೆಯ ಜೀವನ: ತಹಶೀಲ್ದಾರ ನರಸಪ್ಪ Constitution and Developed India Day: Equality through the Constitution: Tahsildar Narasappa


               ಬಳ್ಳಾರಿ 27:  ಸಂವಿಧಾನ ಇಡೀ ದೇಶಕ್ಕೆ ಮಾತ್ರವಲ್ಲದೇ, ಎಲ್ಲಾ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಸಮಾನತೆಯ ಜೀವನ ನಡೆಸಲು ಅವಕಾಶ ನೀಡಿದೆ ಎಂದು ಕುರುಗೋಡು ತಾಲ್ಲೂಕು ತಹಸಿಲ್ದಾರ್ ನರಸಪ್ಪ ಅವರು ಹೇಳಿದರು.ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ, ಪುರಸಭೆ ಕುರುಗೋಡು ಇವರ ಸಂಯುಕ್ತಾಶ್ರಯದಲ್ಲಿ ಕುರುಗೋಡು ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಬುಧುವಾರ ಹಮ್ಮಿಕೊಂಡಿದ್ದ “ಸಂವಿಧಾನ ದಿನಾಚರಣೆ -2025” ಮತ್ತು “ವಿಕಸಿತ ಭಾರತ -2047” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

              ಸಂವಿಧಾನ ರಚಿಸುವ ಮೂಲಕ ಡಾ.ಬಿ.ಆರ್ ಅಂಬೇಡ್ಕರ್ ಅವರು ಸ್ವಾತಂತ್ರ್ಯ, ಸಮಾನತೆ ದೊರಕಿಸಿಕೊಟ್ಟಿದ್ದಾರೆ. ಇದರಿಂದ ಇಡೀ ದೇಶದಲ್ಲಿ ಎಲ್ಲರಿಗೂ ಅನುಕೂಲವಾಗಿದೆ ಎಂದು ಹೇಳಿದರು.ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷರಾದ ನಾಗರಾಜ್ ಮಸೂತಿ ಮಾತನಾಡಿ, ಸಂವಿಧಾನದ ಎಲ್ಲ ಆಶಯಗಳನ್ನು ಅರಿತುಕೊಳ್ಳಬೇಕು. ಮಕ್ಕಳು ಈ ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು ಎಂದರು.

                 ಕೇಂದ್ರ ಸಂವಹನ ಇಲಾಖೆಯ ಎನ್‌.ರಾಮಕೃಷ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಸರ್ಕಾರವು ಈ ದಿನದ ಮಹತ್ವದ ದಿನವನ್ನು ಅರಿಯಲು ಕೇಂದ್ರ ಸಂವಹನ ಇಲಾಖೆಯು ಕಾರ್ಯಕ್ರಮ ಆಯೋಜಿಸಿದೆ. ಮಕ್ಕಳು ಸಂವಿಧಾನದ ಬಗ್ಗೆ ಹೆಚ್ಚಿನ ಜ್ಞಾನ ಹೊಂದಬೇಕು ಎಂದು ಹೇಳಿದರು.ಕಾರ್ಯಕ್ರಮಕ್ಕೂ ಮುನ್ನ ಶಾಲಾ ವಿದ್ಯಾರ್ಥಿನಿಯರಿಂದ ಸಂವಿಧಾನದ ದಿನ ಅಂಗವಾಗಿ ಸಂವಿಧಾನದ ಪೀಠಿಕೆ ಓದುವ ಮೂಲಕ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿಯ ಜಾಥವನ್ನು ಆಯೋಜಿಸಲಾಯಿತು.

          ಸಂವಿಧಾನ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜದ ಬಗ್ಗೆ ವಿಶೇಷ ರಂಗೋಲಿ ಸ್ಪರ್ಧೆ, ಸಂವಿಧಾನದ ಕುರಿತು ಪೇಂಟಿಂಗ್ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಮಲ್ಲಿಕಾರ್ಜುನ ವಹಿಸಿದರು. ಎನ್‌.ಪಂಪಾಪತಿ ಅವರು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಶ್ರೀಕಾಂತ್, ಚನ್ನಬೋರ ನಾಯಕ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.