ಜನಾಧಿಕಾರಕ್ಕೆ ಸಂವಿಧಾನವೇ ಮೂಲ; ಗಣರಾಜ್ಯೋತ್ಸವ ಪ್ರಜಾಪ್ರಭುತ್ವದ ಹಬ್ಬವಾಗಿದೆ: ಜಿ.ಪಂ.ಸಿಇಓ ಭುವನೇಶ ಪಾಟೀಲ
ಧಾರವಾಡ 26 : ಭಾರತದ ಸಂವಿಧಾನ ವಿಶ್ವದ ಶ್ರೇಷ್ಠ ಸಂವಿಧಾನವಾಗಿದೆ. ಮತದಾರರೇ ಪ್ರಭುಗಳು ಎಂಬ ಜನಾಧೀಕಾರಕ್ಕೆ ಸಂವಿಧಾನವೇ ಮೂಲವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ಬಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು.ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಆವರಣದಲ್ಲಿ ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೇರವೇರಿಸಿ, ಮಾತನಾಡಿದರು.ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರು ವಿಶ್ವದ ವಿವಿಧ ಸಂವಿಧಾನಗಳನ್ನು ಅಧ್ಯಯನ ಮಾಡಿ, ನಮ್ಮ ದೇಶಕ್ಕೆ ಸರ್ವ ಕಾಲಕ್ಕೂ ಹೊಂದುವ, ಪ್ರಜಾಪ್ರಗತಿ, ದೇಶದ ಅಭಿವೃದ್ಧಿ ಸ್ಥಿರ ಸರಕಾರಕ್ಕೆ ಪೂರಕವಾಗಿರುವ ಸಂವಿಧಾನವನ್ನು ರಚಿಸಿ ಕೊಟ್ಟಿದ್ದಾರೆ. ಭಾರತೀಯ ಪ್ರಜಾಪ್ರಭುತ್ವ ಜನಸಾಮನ್ಯರ ಆಡಳಿತವಾಗಿದೆ. ಇಲ್ಲಿ ಪ್ರಜೆಗಳೆ ಪ್ರಭುಳು, ಮತದಾರರೆ ತೀರ್ೆ ಅಂತಿಮವಾಗಿದೆ ಎಂದು ಅವರು ತಿಳಿಸಿದರು.ಗಣರಾಜ್ಯೋತ್ಸವ ನಮ್ಮ ರಾಷ್ಟ್ರೀಯ ಹಬ್ಬವಾಗಿದೆ. ಇಂದು ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಮತ್ತು ಮತದಾರರ ಮಹತ್ವ ಕುರಿತು ಸ್ಮರಿಸುತ್ತೇವೆ ಎಂದು ಅವರು ಹೇಳಿದರು.ಧಾರವಾಡ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ. ಸರಕಾರಿ ನೌಕರರಾದ ಅಧಿಕಾರಿಗಳು, ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಕಾಲಕ್ಕೆ ಸಾರ್ವಜನಿಕರಿಗೆ ಸ್ಪಂದಿಸುವ ಮೂಲಕ ಜನಸ್ನೇಹಿ ಆಡಳಿತ ನೀಡಲು ಶ್ರಮಿಸಬೇಕು ಎಂದು ಸಿಇಓ ಭುವನೇಶ ಪಾಟೀಲ ಅವರು ತಿಳಿಸಿದರು.ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮೂಗನೂರಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ವಂದಿಸಿದರು.ಈ ಸಂದರ್ಭದಲ್ಲಿ ಗ್ಯಾರಂಟಿ ಯೊಜನೆಗಳ ಅನುಷ್ಠಾನದ ಜಿಲ್ಲಾ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಸ್.ಆರ್.ಪಾಟೀಲ ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಲಲಿತಾ ಲಮಾಣಿ, ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ ಸೇರಿದಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.