ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ
ಭಾರತದ ಸಂವಿಧಾನ ಸಮರ್ಪಣಾ ದಿನವಾದ ನವೆಂಬರ್ 26ನ್ನು ದೇಶಾದ್ಯಂತ ಸಂವಿಧಾನ ದಿನವನ್ನಾಗಿ ಆಚರಿಸಲಾಗಿದ್ದು ಈ ಅಂಗವಾಗಿ ಮಂಗಳವಾರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಭಾರತದ ಸಂವಿಧಾನದ ಪೀಠಿಕೆ ವಾಚನ ಮಾಡಲಾಯಿತು. ಜಿಲ್ಲಾಧಿಕಾರಿ ಡಾ.ಹರೀಶ್ಕುಮಾರ್ , ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ಕಾರವಾರ ಉಪ ವಿಭಾಗ ಸಹಾಯಕ ಕಮಿಷನರ್ ಪ್ರಿಯಾಂಗ ಇದ್ದರು. ಜಿಲ್ಲೆ ಮಟ್ಟದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.