ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣ: ಶಾಸಕ ಗಣೇಶ ಭರವಸೆ
Construction of Morarji Desai Residential School: MLA Ganesh
ಕಂಪ್ಲಿ 18: ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಕೊಡಿಸಿದಾಗ ಮಾತ್ರ ಮನೆತನವು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ಪಟ್ಟಣದ ಸಕ್ಕರೆ ಕಾರ್ಖಾನೆಯ ಕೋದಂಡರಾಮ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದ ನೂತನ ತಾಲೂಕು ಘಟಕ ಹಾಗೂ ನಾಮಫಲಕ ಉದ್ಘಾಟಿಸಿ ಮಾತನಾಡಿ, ರಾಜ್ಯದ ಎಲ್ಲಾ ವರ್ಗದ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಜೊತೆಗೆ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಿದ ಏಕೈಕ ಸಚಿವ ಸಂತೋಷ್ ಲಾಡ್ ಅವರ ಹೆಸರಿಗೆ ಸಲ್ಲುತ್ತದೆ. ಕಟ್ಟಡ ಸೇರಿದಂತೆ ಇತರೆ ನಿರ್ಮಾಣ ಕಾರ್ಮಿಕರ ದಿನನಿತ್ಯದ ಪರಿಶ್ರಮ ದೊಡ್ಡದು. ಕಾರ್ಮಿಕರ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಕಂಪ್ಲಿ ಕ್ಷೇತ್ರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣಕ್ಕೆ ಅತಿ ಶೀಘ್ರದಲ್ಲಿ ಚಾಲನೆ ದೊರಕಲಿದೆ. ಇದರಿಂದ ಬಹಳಷ್ಟು ಅನುಕೂಲವಾಗಲಿದೆ. ಕಂಪ್ಲಿ ಕ್ಷೇತ್ರದ ಎರಡು ತಾಲೂಕು ಕೇಂದ್ರದಲ್ಲಿ ಕಾರ್ಮಿಕರ ಭವನ ನಿರ್ಮಿಸಲು ತಲಾ 5 ಕೋಟಿಯಂತೆ ಸುಮಾರು 10 ಕೋಟಿ ಅನುದಾನ ನೀಡುವ ಭರವಸೆಯನ್ನು ಸಚಿವ ಸಂತೋಷ್ ಲಾಡ್ ನೀಡಿದ್ದಾರೆ. ಕಾರ್ಮಿಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸಬೇಕು.ಎಂದರು.ಕರ್ನಾಟಕ ರಾಜ್ಯ ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವುಕುಮಾರಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ರೈತರು ದೇಶದ ಬೆನ್ನೆಲುಬಾದರೆ, ಕಾರ್ಮಿಕರು ದೇಶದ ಹೆಬ್ಬಾಗಿಲು ಆಗಿದ್ದಾರೆ. ಕಟ್ಟಡ ಸೇರಿದಂತೆ ಸುಮಾರು 48 ವಲಯದ ಕಾರ್ಮಿಕರಿದ್ದಾರೆ..ಹುಟ್ಟಿನಿಂದ ಸಾವಿನವರೆಗೂ ಸಾಕಷ್ಟು ಸೌಲಭ್ಯಗಳಿವೆ. ಸಚಿವ ಸಂತೋಷ್ ಲಾಡ್ ಹಾಗೂ ಸ್ಥಳೀಯ ಶಾಸಕ ಗಣೇಶ ಅವರು ಕಾರ್ಮಿಕರ ಸಂಕಷ್ಟಗಳಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳು ಒದಸಿದ್ದಾರೆ ಸರ್ಕಾರದ ಸೌಲಭ್ಯಗಳನ್ನು ಪಡೆದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಕಂಪ್ಲಿ ತಾಲೂಕಿನಲ್ಲಿ ಹೊಸದಾಗಿ ಸಂಘ ಉದ್ಘಾಟಿಸಿದ್ದು, ಎಂದರು.
ಹಿರಿಯ ಕಾರ್ಮಿಕರಾದ ಶಿವಪ್ಪ, ಸುಬ್ರಹ್ಮಣ್ಯ, ಈಶ್ವರ, ಮಹೇಶಗೌಡ, ರಂಗಪ್ಪ, ಗುರ್ರ್ಪ, ಪಂಪಾ, ಗಾದಿಲಿಂಗಪ್ಪ, ವಿ.ಸತ್ಯಪ್ಪ ಸನ್ಮಾನಿಸಿಲಾಯಿತು ಈ ಸಂದರ್ಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಗ್ರಾಪಂ ಸದಸ್ಯ ತಿಮ್ಮಪ್ಪ, ಹಿರಿಯ ಮುಖಂಡ ಬಿ.ಲಕ್ಷ್ಮಣ, ಬಾಬು ಮೇಸ್ತ್ರಿ, ಕಂಪ್ಲಿ ತಾಲೂಕು ನೂತನ ಅಧ್ಯಕ್ಷ ಶ್ರೀಹರಿ, ಕಾರ್ಯದರ್ಶಿ ಸುರೇಶ, ಉಪಾಧ್ಯಕ್ಷರಾದ ಮಂಜುನಾಥ, ಶೀಲ್ಪರಾಜ್, ರವಿಶೇಖರ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 