ಶಾಹಿ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣ
Construction of a government primary school building under the CSR grant of Shahi Company
ವಿಜಯಪುರ 08: ಕಾರ್ೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನವನ್ನು ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸದ್ಭಳಕೆ ಮಾಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ರವಿವಾರ ಬಬಲೇಶ್ವರ ತಾಲೂಕಿನ ದೂಡಿಹಾಳ ಗ್ರಾಮದಲ್ಲಿ ಶಾಹಿ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ರೂ. 1.30 ಕೋಟಿ ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆನೆರವೇರಿಸಿ ,ಅವರು ಮಾತನಾಡಿದರು.
ಗ್ರಾಮೀಣ ಸರಕಾರಿ ಶಾಲೆಗಳಲ್ಲಿ ಮಕ್ಕಳುಗುಣಮಟ್ಟ ಶಿಕ್ಷಣ ಪಡೆಯಲು ಬೋಧನೆಯ ಜೊತೆಗೆ, ಕಟ್ಟಡ, ಕಲಿಕಾ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಶಿಕ್ಷಕರ ಅತ್ಯುತ್ತಮ ಮಾರ್ಗದರ್ಶನದಲ್ಲಿ ರೈತರ ಮತ್ತು ಬಡ ಮಕ್ಕಳ ಕಲಿಯಲು ಉತ್ತಮ ಶೈಕ್ಷಣಿಕ ವಾತಾವರಣದ ವ್ಯವಸ್ಥೆ ಮಾಡಲಾಗುತ್ತಿದೆ.ಪಾಲಕರುತಮ್ಮ ಮಕ್ಕಳಿಗೆ,ಅದರಲ್ಲೂ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀಮಲಕಯ್ಯ ಹಿರೇಮಠ, ಶಾಹಿ ಕಂಪನಿಯ ಉಸ್ತುವಾರಿ ಎಂಜನಿಯರ ಧನಂಜಯ ಕುಮಾರನಾಗಸಿಂಹ, ಗ್ರಾಮೀಣ ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜ ತಳವಾರ, ಬಬಲೇಶ್ವರ ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ, ಕಾರಜೋಳ ಗ್ರಾ.ಪಂ ಅಧ್ಯಕ್ಷ ಸುರೇಶಜಾಧವ, ಮುಖಂಡರಾದ ಸೋಮನಾಥ ಕಳ್ಳಿಮನಿ, ರಾಮನಗೌಡ ಬಿರಾದಾರ, ಅಪ್ಪುಗೌಡ ಪಾಟೀಲ ಶೇಗುಣಶಿ, ಬಿ.ಡಿ.ಆಸಂಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 