ಗಾಂಧಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣ
Construction of a room at the Government Higher Primary School in Gandhinagar
ಕೊಪ್ಪಳ 20: 2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಮಂಜೂರಾದ ಕಾಮಗಾರಿಯ ಬಗ್ಗೆ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ವರದಿಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಕೊಪ್ಪಳ ವಿಭಾಗದಿಂದ ಸ್ಪಷ್ಟೀಕರಣ ನೀಡಲಾಗಿದೆ. 2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ ಮಂಜೂರಾದ ಕಾಮಗಾರಿಗೆ ಸಂಬಂಧಿಸಿದಂತೆ ಕೊಪ್ಪಳ ನಗರದ 23ನೇ ವಾರ್ಡನ ಗಾಂಧಿನಗರ ಸ.ಹಿ.ಪ್ರಾ.ಶಾಲೆಯಲ್ಲಿ 1 ಕೊಠಡಿ ನಿರ್ಮಾಣ (ಏಕಐ2324133552) ರೂ.13.50 ಲಕ್ಷಗಳ ನಿರ್ವಹಿಸಿದ ಕಾಮಗಾರಿಯು ಕಳಪೆ ಮಟ್ಟದಿಂದ ಕೂಡಿರುವುದಾಗಿ ಹಾಗೂ ಮೂರನೇ ತಂಡದ ತಪಾಸಣೆಯಾಗದೇ ಬಿಲ್ಲನ್ನು ಪಡೆದಿರುವುದಾಗಿ ಸುದ್ದಿ ವಾಹಿನಿಯಲ್ಲಿ ನವೆಂಬರ್ 19ರಂದು ವರದಿ ಪ್ರಸಾರವಾಗಿದ್ದು,
ಈ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಯ ದಾಖಲಾತಿಗಳನ್ನು ಪರೀಶೀಲಿಸಿದಾಗ ನಿಯಮನುಸಾರ ಸಕ್ಷಮ ಪ್ರಾಧಿಕಾರದಿಂದ ಆಡಳಿತಾತ್ಮಕ ಮತ್ತು ತಾಂತ್ರಿಕ ಅನುಮೋದನೆ ಪಡೆದು ಇ-ಪ್ರಕ್ಯೂರಮೆಂಟ್ ಮೂಲಕ ಟೆಂಡರ್ ಕರೆದು ಎಲ್-1 ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿ ಕಾಮಗಾರಿಯನ್ನು ಅನುಷ್ಟಾನ ಮಾಡಿರುತ್ತಾರೆ ಹಾಗೂ ಸದರಿ ಕಾಮಗಾರಿಗೆ ಮೂರನೇ ತಂಡದ ಎಜೆನ್ಸಿಯಾದ ಪ್ರಾಚಾರ್ಯರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ತಳಕಲ್ ರವರಿಂದ ತಪಾಸಣೆ ಮಾಡಿಸಿ ಗುಣಮಟ್ಟ ಪರೀಶೀಲನಾ ವರದಿಯ ನಂತರ ಬಿಲ್ಲನ್ನು ಮಾನ್ಯ ಕಾರ್ಯದರ್ಶಿಗಳು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರಗಿ ರವರಿಗೆ ಈ ಕಾಮಗಾರಿಯ ವೆಚ್ಚ ಪಾವತಿಸಲು ಕಾರ್ಯನಿರ್ವಾಹಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಕೊಪ್ಪಳ ಕಛೇರಿಯಿಂದ ಪತ್ರ ಬರೆಯಲಾಗಿರುತ್ತದೆ. ಈ ಕಾಮಗಾರಿಯನ್ನು ನಿಯಮನುಸಾರ ಅನುಷ್ಟಾನ ಮಾಡಲಾಗಿರುತ್ತದೆ ಹಾಗೂ ಗುಣಮಟ್ಟದಿಂದ ಕಾಮಗಾರಿಯನ್ನು ನಿರ್ಮಾಣ ಮಾಡಲಾಗಿರುತ್ತದೆ ಎಂದು ಈ ಮೂಲಕ ಸ್ಪಷ್ಟಿಕರಣ ನೀಡಲಾಗಿದೆ ಎಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ಕೊಪ್ಪಳ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 