ಜೆಸ್ಕಾಂ ಎಇಇ ಕಚೇರಿ ಕಟ್ಟಡ ಕಾಮಗಾರಿಗೆ ಚಾಲನೆ
Construction work on GESCOM AEE office building launched
ಲೋಕದರ್ಶನ ವರದಿ
ಕಂಪ್ಲಿ, ಜು. 4: ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ಜೆಸ್ಕಾಂ ಉಪವಿಭಾಗ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೊನೆಗೂ ಶನಿವಾರ ಚಾಲನೆ ದೊರೆತಿದೆ. ಅರಣ್ಯ ಇಲಾಖೆಯ ಅನುಮತಿ ವಿಳಂಬದಿಂದ ಕಟ್ಟಡ ನಿರ್ಮಾಣ ಸ್ಥಳದಲ್ಲಿದ್ದ ಸುಮಾರು 10ಕ್ಕೂ ಹೆಚ್ಚು ಮರಗಳನ್ನು ತೆರವುಗೊಳಿಸಲು ಸಾಧ್ಯವಾಗದೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ ಅರಣ್ಯ ಇಲಾಖೆಯಿಂದ ಮರಗಳ ತೆರವಿಗೆ ಅನುಮತಿ ದೊರೆತ ಹಿನ್ನೆಲೆಯಲ್ಲಿ ಸ್ಥಳವನ್ನು ಸಿದ್ಧಪಡಿಸಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸಲಾಗಿದೆ.
2024ರ ಸೆಪ್ಟೆಂಬರ್ನಲ್ಲಿ ಸ್ಥಳೀಯ ಜೆಸ್ಕಾಂ ಸಹಾಯಕ ಎಂಜಿನಿಯರ್ ಕಚೇರಿಯನ್ನು ಉಪವಿಭಾಗ ಕಚೇರಿಯಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಆದರೆ ಪ್ರತ್ಯೇಕ ಕಟ್ಟಡದ ಕೊರತೆಯಿಂದ ಎಇಇ ಕಚೇರಿ ಸಹಾಯಕ ಎಂಜಿನಿಯರ್ ಕಚೇರಿ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರ ಪ್ರಯತ್ನದಿಂದ 2025ಹಿ26್ಫೂ ಸಾಲಿನ ಜೆಸ್ಕಾಂ ಅನುದಾನ ಯೋಜನೆಯಡಿ ?1.50 ಕೋಟಿ ವೆಚ್ಚದಲ್ಲಿ ಎಇಇ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, 2026ರ ಏಪ್ರಿಲ್ 18ರಂದು ಭೂಮಿಪೂಜೆ ನೆರವೇರಿಸಲಾಗಿತ್ತು. ಆದರೆ ಅರಣ್ಯ ಇಲಾಖೆಯ ಅನುಮತಿ ವಿಳಂಬದಿಂದ ಕಾಮಗಾರಿ ಆರಂಭವಾಗಿರಲಿಲ್ಲ.
ಇತ್ತೀಚೆಗೆ ಈ ಕುರಿತು ಪ್ರಕಟವಾದ ವರದಿಯ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಸ್ಥಳವನ್ನು ಗುರುತಿಸುವ (ಮಾರ್ಕಿಂಗ್) ಕಾರ್ಯ ಪೂರ್ಣಗೊಳಿಸಿದ್ದು, ಇದೀಗ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಧಿಕೃತ ಚಾಲನೆ ನೀಡಲಾಗಿದೆ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಿಸುವ ಭರವಸೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಖಾಜಾ ಮೊಹಿದ್ದೀನ್, ಸಂತೋಷ್, ಕೆ. ಶ್ರೀನಿವಾಸ ಪ್ರಸಾದ್, ಗುತ್ತಿಗೆದಾರರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 