ಮೋದಿ, ಅಮಿತ್ ಶಾ ವಿರುದ್ಧ ಜೆಎನ್‌ಯು ವಿದ್ಯಾರ್ಥಿಗಳ ವಿವಾದಾತ್ಮಕ ಘೋಷಣೆ
Controversial slogan of JNU students against Modi, Amit Shah
ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (JNU) ಮತ್ತೊಮ್ಮೆ ರಾಜಕೀಯ ಸಂಘರ್ಷದ ಕೇಂದ್ರಬಿಂದುವಾಗಿದೆ. 2020ರ ದೆಹಲಿ ದಂಗೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ, ಜೆಎನ್ಯು ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿವಾದಾತ್ಮಕ ಘೋಷಣೆಗಳನ್ನು ಕೂಗಲಾಗಿದೆ.
ಜನವರಿ 5ರ ರಾತ್ರಿ ಜೆಎನ್ಯೂ ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿತು. ಇದೇ ವೇಳೆ ಪ್ರಧಾನಿ ಮತ್ತು ಗೃಹ ಸಚಿವರ ವಿರುದ್ಧ ತೀವ್ರ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜೆಎನ್ಯೂ ವಿದ್ಯಾರ್ಥಿ ಸಂಘದ (JNUSU) ಅಧ್ಯಕ್ಷೆ ಅದಿತಿ ಮಿಶ್ರಾ ಮಾತನಾಡಿ, "ನಾವು ಪ್ರತಿ ವರ್ಷ ಕ್ಯಾಂಪಸ್ ಹಿಂಸಾಚಾರವನ್ನು ಖಂಡಿಸಿ ಈ ಪ್ರತಿಭಟನೆ ನಡೆಸುತ್ತೇವೆ. ಕೂಗಿದ ಘೋಷಣೆಗಳು ವೈಚಾರಿಕವೇ ಹೊರತು ವೈಯಕ್ತಿಕ ದಾಳಿಯಲ್ಲ," ಎಂದು ಸಮರ್ಥಿಸಿಕೊಂಡಿದ್ದಾರೆ.
ಘೋಷಣೆಗಳು ಪ್ರಚೋದನಕಾರಿ ಮತ್ತು ಸಂವಿಧಾನ ವಿರೋಧಿ ಎಂದು ಬಣ್ಣಿಸಿರುವ ಜೆಎನ್ಯು ಆಡಳಿತ ಮಂಡಳಿಯು, ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಪತ್ರ ಬರೆದಿದೆ.
ದೆಹಲಿ ಸಚಿವರಾದ ಆಶಿಶ್ ಸೂದ್ ಮತ್ತು ಮಂಜಿಂದರ್ ಸಿಂಗ್ ಸಿರ್ಸಾ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. "ದೇಶವನ್ನು ಒಡೆಯುವ ಮಾತುಗಳನ್ನಾಡುವವರಿಗೆ ಬೆಂಬಲ ನೀಡುತ್ತಿರುವ ಪ್ರತಿಪಕ್ಷಗಳ ನಡೆಯೇ ಇಂತಹ ಘಟನೆಗಳಿಗೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 