ಜಿಲ್ಲೆಯಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ಸಹಕಾರ- ಉಪ ಸಭಾಧ್ಯಕ್ಷ ರುದ್ರ್ಪ ಲಮಾಣಿ
Cooperation for the construction of a ring road in the district - Deputy Speaker Rudrapa Lamani
ಜಿಲ್ಲೆಯಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ಸಹಕಾರ- ಉಪ ಸಭಾಧ್ಯಕ್ಷ ರುದ್ರ್ಪ ಲಮಾಣಿ
ಹಾವೇರಿ 04 : ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಲು ನಾವೆಲ್ಲರೂ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಿದೆ ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರ್ಪ ಲಮಾಣಿ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ ವರ್ತುಲ ರಸ್ತೆ ಹಾಗೂ ಕೆಐಎಡಿಬಿ ಕೈಗಾರಿಕಾ ನಿರ್ಮಾಣ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಧಿಕಾರಿ ಸಿಬ್ಬಂದಿಗಳ ಕೊರತೆ ಕೆಲವು ಅಭಿವೃದ್ಧಿ ಕೆಲಸಗಳು ಕುಂಟಿತವಾಗಿದೆ. ಅಧಿಕಾರಿ ಹಾಗೂ ಸಿಬ್ಬಂದಿಗಳ ನಿಯೋಜನೆಗೆ ಕ್ರಮ ವಹಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಭವಿಷ್ಯದ ಹಿತದೃಷ್ಟಿಯಿಂದ ವರ್ತುಲ ರಸ್ತೆ ನಿರ್ಮಾಣವಾಗಬೇಕಾಗಿದೆ ವರ್ತುಲ ರಸ್ತೆ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಬೇಕು ವರ್ತುಲ ರಸ್ತೆ ನಿರ್ಮಾಣಕ್ಕೆ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಂಡು ಪ್ರಸ್ತಾವನೆ ಸಿದ್ದಪಡಿಸಿ ಸಲ್ಲಿಸಿ ಅದನ್ನು ಅನುಮೋದನೆ ಮಾಡಿಕೊಂಡು ಬರುತ್ತೇನೆ ಎಂದರು. ಬಳಿಕ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪೂಜಾರ್ ವೀರಮಲ್ಲಪ್ಪರವರು ಸಭೆಗೆ ಮಾಹಿತಿ ನೀಡಿ, ಹಾವೇರಿ ಪ್ರವೇಶದ್ವಾರದಿಂದ ಆರಂಭವಾಗಿ ದೇವಗಿರಿ ಯಲ್ಲಾಪುರ, ಮೆಡಿಕಲ್ ಕಾಲೇಜು, ರೈಲ್ವೆ ಕ್ರಾಸ್, ಗುತ್ತಲ್ ರೋಡ್, ಹೊಸ ಹೈವೆ ಹೀಗೆ ಒಟ್ಟು 11.5 ಕಿ ಮೀ ವರೆಗೆ ವರ್ತುಲ ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ .ಈಗಾಗಲೇ ಸರ್ವೆ ಕೆಲಸ ಆರಂಭಿಸಿದ್ದು ಜೂನ್ 30ರ ಒಳಗಾಗಿ ಸರ್ವೆ ಕೆಲಸವನ್ನು ಪೂರ್ಣಗೊಳಿಸಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು. ಗಣಜೂರು ಕೊಲ್ಲೂರು ರಸ್ತೆ ಕಾಮಗಾರಿಯು ನಿಧಾನಗತಿಯಾಗುತ್ತಿದೆ ಸಾಕಷ್ಟು ಅನುದಾನ ಲಭ್ಯವಿದ್ದರೂ ಕೂಡ ರಸ್ತೆ ಕಾಮಗಾರಿ ಮಾಡಲು ಅಧಿಕಾರಿಗಳಲ್ಲಿ ಇಚ್ಛಾ ಶಕ್ತಿ ಕೊರತೆ ಎದ್ದು ಕಾಣುತ್ತಿದೆ ಗಣಜೂರು ಕೊಳ್ಳುರು ರಸ್ತೆಯನ್ನು ಸ್ವತಃ ನೋಡಿಕೊಂಡು ಬಂದಿದ್ದೇನೆ ನನಗೆ ಅದು ತೃಪ್ತಿದಾಯವಾಗಿಲ್ಲ ಮೊದಲನೇ ಹಂತದ ಕಾಮಗಾರಿ ಪೂರ್ಣವಾಗಿಲ್ಲ ಇನ್ನೂ ಎರಡನೇ ಹಂತದ ಕಾಮಗಾರಿ ಯಾವಾಗ ಆರಂಭಿಸುತ್ತಿರಿ, ಯಾವುದೇ ಕೆಲಸವಿದ್ದರೂ ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಅನುದಾನ ವಿದ್ದರು ಸರಿಯಾಗಿ ಕೆಲಸಮಾಡುತ್ತಿಲ್ಲ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಬೇಜವಾಬ್ದಾರಿ ತೋರಿಸುತ್ತಿದ್ದೀರಿ ಎಂದು ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್ ಎಫ್‌ಎನ್ ಗಾಜಿಗೌಡ್ರ, ನಗರಸಭೆ ಅಧ್ಯಕ್ಷರಾದ ಶಶಿಕಲಾ ರಾಮು ಮಾಳಗಿ, ನಗರಸಭೆ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸಾತೇನಹಳ್ಳಿ, ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ನಗರಸಭೆ ಸದಸ್ಯರಾದ ಸಂಜೀವಕುಮಾರ್ ನೀರಲಗಿ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 