ಗದಗ 17: ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ನಾಗರಿಕರಿನಿಗೂ ಉಚಿತ ಮಾಸ್ಕ್ ವಿತರಣೆಗೆ ಕ್ರಮ ಜರುಗಿಸಲಾಗುತ್ತಿದೆ.
ಈ ಕುರಿತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಅಗತ್ಯದ ಕ್ರಮ ಕೈಗೊಳ್ಳುವಂತೆ ಸೂಚಿಸಿದರ ಮೇರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಂಬಂಧಿಸಿದ ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ನೇತ್ರತ್ವದಲ್ಲಿ ಸ್ವ ಸಹಾಯ ಗುಂಪುಗಳ ಸಹಕಾರದೊಂದಿಗೆ ಪುನರ್ ಬಳಕೆಯಾಗುವಂತಹ ಮಾಸ್ಕ್ಗಳನ್ನು ತಯಾರಿಸಿ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಉಚಿತವಾಗಿ ಮಾಸ್ಕ ವಿತರಿಸಲು ಅಗತ್ಯದ ಕ್ರಮ ಜರುಗಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಅಂದಾಜು 8 ಲಕ್ಷ ಮಾಸ್ಕ್ ತಯಾರಿಸಿ ಉಚಿತವಾಗಿ ವಿತರಿಸುವ ಗುರಿ ಹೊಂದಲಾಗಿದೆ ಎಂದು ಗದಗ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಎಚ್ ಪಾಟೀಲ ತಿಳಿಸಿದ್ದಾರೆ.