ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆಗೆ ಜಿಲ್ಲೆಯಲ್ಲಿ ಅರಿವು ಮೂಡಿಸಿ: ಡಿಸಿ ನಾಗೇಂದ್ರ ಪ್ರಸಾದ್.ಕೆ
Create awareness in the district to prevent atrocities against Scheduled Castes and Scheduled Tribe
ಬಳ್ಳಾರಿ 08: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಶಿಕ್ಷೆ ಕುರಿತು ಜಿಲ್ಲೆಯಲ್ಲಿ ಎಲ್ಲ ಸಮುದಾಯಗಳ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಏರಿ್ಡಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ದೌರ್ಜನ್ಯ ಪ್ರಕರಣಗಳ ಕುರಿತು ಜಿಲ್ಲೆಯಲ್ಲಿ ದಲಿತ ಮುಖಂಡರ ಸಭೆ ಆಯೋಜಿಸಿ, ದೌರ್ಜನ್ಯ ಪ್ರಕರಣ ತಡೆ ಕುರಿತು ಅರಿವು ಮೂಡಿಸಬೇಕು. ಈ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಲು ಸಹಾಯವಾಗುತ್ತದೆ ಎಂದರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಯು ಸಾಕಷ್ಟು ದುರುಪಯೋಗವಾಗುತ್ತಿದೆ. ಇದರಿಂದ ನಿಜ ಪ್ರಕರಣಗಳಿಗೆ ಮೌಲ್ಯತೆ ಕಳೆದುಕೊಳ್ಳುತ್ತಿವೆ. ಹಾಗಾಗಿ ದೌರ್ಜನ್ಯ ಪ್ರಕರಣದ ನಿಖರ ಮಾಹಿತಿ ತಿಳಿದುಕೊಳ್ಳಬೇಕು. ಬಿ-ರಿಪೋರ್ಟ್ ಮಾಡುವುದಕ್ಕೂ ಮುನ್ನ ಸೂಕ್ತ ತನಿಖೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.ಭೂಮಿಗೆ ಸಂಬಂಧಿಸಿದಂತೆ ಜಾಸ್ತಿ ಪ್ರಕರಣ ಕಂಡುಬರುತ್ತಿವೆ. ದೌರ್ಜನ್ಯಕ್ಕೊಳಗಾದವರಿಗೆ ದೈಹಿಕ, ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬಬೇಕು. ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಗೆ ಮೀಸಲಾದ ಅನುದಾನ ಆಯಾ ಸಾಲಿನಲ್ಲಿಯೇ ವೆಚ್ಚವಾಗಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ತಲುಪಬೇಕು ಎಂದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದಪ್ಪ ಅವರು ಮಾತನಾಡಿ, ಜನವರಿ-2025 ರಿಂದ ಆಗಸ್ಟ್ 31 ರ ವರೆಗೆ 18 ಪ್ರಕರಣಗಳಲ್ಲಿ 26 ಸಂತ್ರಸ್ಥರಿಗೆ ಒಟ್ಟು ರೂ.22,75,000 ಪರಿಹಾರ ಮಂಜೂರು ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ಯಾವುದೇ ವಿಧದ ‘ಬಿ’ ರಿಪೋರ್ಟ್ ಪ್ರಕರಣ ದಾಖಲಾಗಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ, ಜಿಲ್ಲಾ ಸರ್ಕಾರಿ ಅಭಿಯೋಜಕರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 