ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನದಡಿ ನಿಷ್ಕ್ರೀಯ ಖಾತೆಗಳನ್ನು ಸಕ್ರಿಯಗೊಳಿಸಲು ಜಾಗೃತಿ ಮೂಡಿಸಿ
Create awareness to activate dormant accounts under the Your Money Your Rights campaign
ವಿಜಯಪುರ 29 : ಎಲ್ಲ ಬ್ಯಾಂಕುಗಳು ತಮ್ಮಲ್ಲಿರುವ ನಿಷ್ಕ್ರಿಯ ಠೇವಣಿಗಳನ್ನು ಹತ್ತು ವರ್ಷಗಳ ತರುವಾಯ, ರಿಸರ್ವ್ ಬ್ಯಾಂಕ್‌ಗೆ ರವಾನಿಸುತ್ತಾರೆ. ಆದ್ದರಿಂದ ಬಾಕಿ ಇರುವ ನಿಷ್ಕ್ರೀಯ ಖಾತೆಗಳನ್ನು ಸಮಾಪನೆಗೊಳಿಸುವ ಅಥವಾ ಅಗತ್ಯ ದಾಖಲೆಗಳನ್ನು ಕೆವೈಸಿ ಮಾಡಿಕೊಳ್ಳುವ ಮೂಲಕ ನಿಷ್ಕ್ರಿಯ ಖಾತೆಗಳನ್ನು ಸಕ್ರಿಯಗೊಳಿಸುವ ವ್ಯವಸ್ಥೆಯ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಎಲ್ಲಾ ಬ್ಯಾಂಕಿನ ಮ್ಯಾನೇಜರ ಅವರಿಗೆ ಅಗ್ರಣೀಯ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ಬಿ ಸಿದ್ದಯ್ಯ ಅವರು ಹೇಳಿದರು.ಅವರು ಶನಿವಾರ ಜಿಲ್ಲಾ ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಿದ್ದ ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಮಾತನಾಡಿ, ಸರಕಾರದ ವಿವಿಧ ಇಲಾಖೆಯ ನಿಷ್ಕ್ರಿಯ ಠೇವಣಿಗಳನ್ನು ಕೂಡಲೇ ಆಯಾ ಬ್ಯಾಂಕುಗಳನ್ನು ಸಂಪರ್ಕಿಸಿ ಮರು ಸಕ್ರಿಯಗೊಳಿಸಬೇಕು ಎಂದು ಅವರು ಹೇಳಿದರು.
ಭಾರತೀಯ ರಿಸರ್ವ್ ಬ್ಯಾಂಕಿನ ಮುಖ್ಯ ಅಭಿವೃದ್ಧಿ ಅಧಿಕಾರಿಗಳಾದ ಮೊನಿ ರಾಜ ಬ್ರಹ್ಮ ಅವರು ಮಾತನಾಡಿ, ರಿಸರ್ವ್ ಬ್ಯಾಂಕಿನಿಂದ ನಿಷ್ಕ್ರಿಯ ಠೇವಣಿಗಳನ್ನು ಸಕ್ರಿಯಗೊಳಿಸಿಕೊಳ್ಳಲು ಗ್ರಾಹಕರು ಹಾಗೂ ಬ್ಯಾಂಕಿನವರು ಅನುಸರಿಸಬೇಕಾದ ಕಾರ್ಯವಿಧಾನಗಳ ಕುರಿತು ವಿಸೃತ್ತವಾಗಿ ವಿವರಿಸಿದರು. ಈ ಸಂದರ್ಭದಲ್ಲಿ ಅಗ್ರಣೀಯ ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾದ ನಾಗಾರ್ಜುನ, ಎಲ್ಲ ಬ್ಯಾಂಕುಗಳ ಪ್ರಬಂಧಕರು, ವಿವಿಧ ಇಲಾಖೆಯ ಅಧಿಕಾರಿ,ಸಿಬ್ಬಂದಿಗಳು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 