ಹೃದಯ ಶ್ವಾಸಕೋಶ ಪುನರುಜ್ಜೀವನ ಕುರಿತು ಹೆಚ್ಚಿನಜಾಗೃತಿ ಮೂಡಿಸಿ: ಡಾ.ಯಲ್ಲಾ ರಮೇಶ್ ಬಾಬು
Create more awareness about cardiopulmonary resuscitation: Dr. Yalla Ramesh Babu
ಹೃದಯ ಶ್ವಾಸಕೋಶ ಪುನರುಜ್ಜೀವನ ಕುರಿತು ಹೆಚ್ಚಿನಜಾಗೃತಿ ಮೂಡಿಸಿ: ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ 15: ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಮಿತಿಗಳಿಲ್ಲದೇ ಹೃದಯಾಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ವೈದ್ಯಾಧಿಕಾರಿಗಳು ಆರೋಗ್ಯ ಸಿಬ್ಬಂದಿ ವರ್ಗದವರಿಗೆ ಹಾಗೂ ಸಾರ್ವಜನಿಕರಿಗೆ ಎಲ್ಲಾ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಹೃದಯ ಶ್ವಾಸಕೋಶ ಪುನರುಜ್ಜೀವನ (ಸಿಆರ್‌ಪಿ) ಕುರಿತು ಪ್ರಾತ್ಯಕ್ಷತೆ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ಹೃದಯ-ಶ್ವಾಸಕೋಶ ಪುನರುಜ್ಜೀವನ (ಸಿಆರ್‌ಸಿ) ಕುರಿತು ಅಕ್ಟೋಬರ್ 13 ರಿಂದ 17 ರವರೆಗೆ ಜಾಗೃತಿ ವಾರ ಹಿನ್ನಲೆಯಲ್ಲಿ ಜಾಗೃತಿ ಮತ್ತು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಮಾತನಾಡಿದರು.ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ವೃತ್ತಿಪರ ವೈದ್ಯಕೀಯ ಸಹಾಯ ಬರುವವರಿಗೆ ಧೈರ್ಯ, ಸಹಾನುಭೂತಿ ಮತ್ತು ಜವಾಬ್ದಾರಿಯೊಂದಿಗೆ ಸಹಾಯವಾಗುವ ಹಿನ್ನಲೆಯಲ್ಲಿ ಹೃದಯ-ಶ್ವಾಸಕೋಶ ಪುನರುಜ್ಜೀವನ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ವಿವಿಧ ವಿಭಾಗಗಳ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ಮಾಹಿತಿ ನೀಡಿದರು.
ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿನ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳಿಗೆ, ಆರೋಗ್ಯ ನೀರೀಕ್ಷಣಾಧಿಕಾರಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲು ಹಾಗೂ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರಿಗೂ ಸಹ ಜಾಗೃತಿ ಮೂಡಿಸಲು ಸಂಬಂಧಪಟ್ಟ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು ಜಾಗೃತಿ ಮೂಡಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ.ವೀರೇಂದ್ರ ಕುಮಾರ್, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಕಚೇರಿ ಅಧೀಕ್ಷಕರು ಬಸವರಾಜ, ಡಾ. ಸುರೇಶ್, ಪ್ರತಾಪ್ ಎನ್.ವಿ.ಬಿ.ಡಿ.ಸಿ.ಪಿ ಸಲಹೆಗಾರರು, ವಿವಿಧ ವಿಭಾಗದ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 