೭೫ ಕೋಟಿ ಶಿಷ್ಯ ವೇತನ ಬಿಡುಗಡೆ; ಆರೋಗ್ಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ಬೆಂಗಳೂರು, ಮೇ ೯,ಕೊರೋನಾ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಹಿರಿಯ ಸ್ಥಾನಿಕ ವೈದ್ಯಾಧಿಕಾರಿಗಳು, ಹೌಸ್‌ಸರ್ಜನ್ ಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬರಬೇಕಿದ್ದ ೭೫ ಕೋಟಿ ರೂಪಾಯಿ ಶಿಷ್ಯವೇತನ ವನ್ನು ಮುಖ್ಯಮಂತ್ರಿ ಗಳು ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್  ದಾವಣಗೆರೆಯಲ್ಲಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,  ಕೋವಿಡ್ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ಸೇರಿದಂತೆ ಇತರೆ ಯಾವುದೇ ಸಿಬ್ಬಂದಿ ಕೋವಿಡೇತರ ಆಸ್ಪತ್ರೆಯಲ್ಲಿ ಕೆಲಸ ಮಾಡುವಂತಿಲ್ಲ ಎಂದು ಹೇಳಿದರು.
ಕೇಂದ್ರ ಆರೋಗ್ಯ  ಸಚಿವಾಲಯದ  ಮಾರ್ಗಸೂಚಿಯ ಪ್ರಕಾರ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಯಾವುದೇ ಸಿಬ್ಬಂದಿ ಕೋವಿಡೇತರ ಆಸ್ಪತ್ರೆಯಲ್ಲಿ ಕೆಲಸ ಮಾಡುವಂತಿಲ್ಲ. ರಾಜ್ಯದಲ್ಲಿ ಈ ಮಾರ್ಗ ಸೂಚಿ ಸರಿಯಾಗಿ ಪಾಲನೆಯಾಗುತ್ತಿದೆ  ಹೇಳಿದರು ರಾಜ್ಯದಲ್ಲಿ ಖಾಸಗಿ ನರ್ಸಿಂಗ್ ಹೋಂಗಳನ್ನು ತ್ವರಿತ ಗತಿಯಲ್ಲಿ ಆರಂಭಿಸದಿದ್ದರೆ ಅಂಥಹ ಆಸ್ಪತ್ರೆಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ. ಇಂತಹ ಸಮಯದಲ್ಲಿ ಪ್ರತಿಯೊಬ್ಬರು ಅವರ ಕರ್ತವ್ಯ ಮರೆಯಬಾರದು. ಆದರೆ  ಕೋವಿಡ್‌ಯೇತರ   ಆಸ್ಪತ್ರೆಗಳು ರಾಜ್ಯದಲ್ಲಿ ಪೂರ್ಣಪ್ರಮಾಣದಲ್ಲಿ ಕೆಲಸ ಮಾಡುತ್ತಿಲ್ಲ. ಇದರಿಂದ ಬೇರೆ ರೋಗಿಗಳಿಗೆ ತೊಂದರೆಯಾಗುತ್ತಿದೆ.ಈ ಕುರಿತು ರಾಜ್ಯದ ನಾನಾ ಭಾಗಗಳಿಂದ ತಮಗೆ ದೂರುಗಳು ಬಂದಿವೆ ತಿಳಸಿದರು.