ಸ್ವಾಸ್ಥ್ಯ ಬದುಕಿಗೆ ಪರಿಸರ ಬೆಳೆಸಿ: ಶಂಕರಗೌಡ ಸೋಮನಾಳ
Cultivate an environment for healthy living: Shankaragowda Somanala
ಸ್ವಾಸ್ಥ್ಯ ಬದುಕಿಗೆ ಪರಿಸರ ಬೆಳೆಸಿ: ಶಂಕರಗೌಡ ಸೋಮನಾಳ
ವಿಜಯಪುರ, 05 : ಸ್ವಾಸ್ಥ್ಯ ಬದುಕಿಗೆ ಪರಿಸರ ಬೆಳೆಸಿ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗ ಮತ್ತು ಎನ್.ಎಸ್.ಎಸ್. ಕೋಶದ ವತಿಯಿಂದ ಗುರುವಾರ ಆಯೋಜಿಸಿದ್ದ ಪರಿಸರ ದಿನಾಚರಣೆಯನ್ನು ಸಸಿ ನೆಡುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ನಗರೀಕರಣದ ಧಾವಂತದಲ್ಲಿ ಇಂದು ಕಾಡು ನಾಶವಾಗುತ್ತಿದ್ದು, ‘ಕಾಡು ಕಡಿದು ನಾಡು ಬೆಳೆಸಿ’ ಎಂಬ ಮನೋಭಾವನೆ ಕಂಡುಬರುತ್ತದೆ. ಮುಂದಿನ ಪೀಳಿಗೆಯ ಆರೋಗ್ಯಕರ ಬದುಕಿಗೆ ಹಾಗೂ ಎಲ್ಲ ಜೀವರಾಶಿಗಳ ಸಂಕಲನದ ರಕ್ಷಣೆಗೆ ಪರಿಸರವನ್ನು ಉಳಿಸಿ ಬೆಳಸಬೇಕಾಗಿದೆ. ಪ್ರತಿ ವಿದ್ಯಾರ್ಥಿಯು ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರೊ. ವಿಷ್ಣು ಶಿಂದೆ, ಪ್ರೊ. ಉದಯಕುಮಾರ ಕುಲಕರ್ಣಿ ಹಾಗೂ ಮತ್ತಿತರು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕೋಶದ ಸಂಯೋಜನಾಧಿಕಾರಿ ಪ್ರೊ. ಅಶೋಕ ಸುರಪುರ ಸ್ವಾಗತಿಸಿದರು. ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕ ಡಾ. ನಟರಾಜ ದುರ್ಗಣ್ಣವರ ವಂದಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 