ಬಿಎಂ ಪಾಟೀಲ ಶಾಲೆಯಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ
Cultural and sports activities launched at BM Patil School
ವಿಜಯಪುರ 13 : ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ. ಎಂ. ಪಾಟೀಲ ಪಬ್ಲಿಕ್ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂದು ಶನಿವಾರ ಶಾಲಾ ಅಂತರ್ ಸದನಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕ್ರೀಡಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನಡೆಯಿತು. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ನಾನಾ ಹವ್ಯಾಸಗಳ ತರಬೇತಿ ತರಗತಿಗಳನ್ನು ಪ್ರಾರಂಭಿಸಲಾಯಿತು.
ವಿದ್ಯಾರ್ಥಿಗಳು ತಮಗಿಷ್ಟವಾದ ಹವ್ಯಾಸವನ್ನು ಆಯ್ಕೆ ಮಾಡಿಕೊಂಡರು. ಇವರಿಗೆ ನಗರದ ನುರಿತ ತರಬೇತುದಾರರನ್ನು ನೇಮಿಸಿ, ಚೆಸ್, ಫುಟ್ಬಾಲ್, ವಾಲಿಬಾಲ್, ಬಾಸ್ಕೆಟ್ಬಾಲ್, ಕ್ರಿಕೆಟ್, ಸ್ಕೆಟಿಂಗ್, ನೃತ್ಯ, ಸಂಗೀತ, ಝುಂಬಾ, ಗಾರ್ಡನಿಂಗ್, ಅಗ್ನಿರಹಿತ ಆಹಾರ ತಯಾರಿಕೆ ಮುಂತಾದ ಚಟುವಟಿಕೆಗಳಿಗೆ ತರಬೇತಿಯನ್ನು ವಿದ್ಯಾರ್ಥಿಗಳ ಆಸಕ್ತಿಗನುಣವಾಗಿ ಪ್ರಾರಂಭಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಶಾಲೆಯ ಉಪಪ್ರಾಚಾರ್ಯೆ ವಸುಧಾ ನಾರ್ವೇಕರ ಮಾತನಾಡಿ, ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು. ಸೋಲೇ ಗೆಲುವಿನ ಸೋಪಾನ ಮತ್ತು ಗೆಲುವೆಂಬುದು ಸತತ ಪರಿಶ್ರಮದ ಫಲ ಎಂಬುದನ್ನು ಮಕ್ಕಳಿಗೆ ಕಥೆಯ ಮೂಲಕ ತಿಳಿಸಿದರು. ಸಧನಗಳ ಮುಖ್ಯಶಿಕ್ಷಕರು ಮತ್ತು ಮುಖ್ಯಬಾಲಕ ಬಾಲಕಿಯರಿಗೆ ಅವರ ಸದನಧ್ವಜ ಮತ್ತು ಸಮವಸ್ತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನೃತ್ಯ ಶಿಕ್ಷಕಿ ಪೂಜಾ ಮತ್ತು ತರಬೇತಿದಾರ ಸಮೀರಖಾನ್ ನೃತ್ಯ ಮಾಡಿ ವಿದ್ಯಾರ್ಥಿಗಳಲ್ಲಿ ಉತ್ಸಾಹವನ್ನು ತುಂಬಿದರು. ಸಂಗೀತ ಶಿಕ್ಷಕಿ ಸಂತೋಷಿ ಕುಸೂರ ಪ್ರಾರ್ಥಿಸಿದರು.
ಸಾಂಸ್ಕೃತಿಕ ಕಾರ್ಯಸಂಯೋಜಕಿ ಫರಾ ಜಹಾಗೀದಾರ ನಿರೂಪಿಸಿದರು. ಕಿರಿಯರ ವಿಭಾಗದ ಸಂಸ್ಕೃತಿಕ ಕಾರ್ಯಸಂಯೋಜಕಿ ಶಿವಾನಿ ವಂದಿಸಿದರು.ಕಠಠ ಅಚಿಠಿಣಠ: ವಿಜಯಪುರ:: ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ. ಎಂ. ಪಾಟೀಲ ಪಬ್ಲಿಕ್ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ಅಂತರ್ ಸದನಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕ್ರೀಡಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನಡೆಯಿತು. ಶಾಲೆಯ ಉಪಪ್ರಾಚಾರ್ಯೆ ವಸುಧಾ ನಾರ್ವೇಕರ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೂಜಾ, ವಿದ್ಯಾರ್ಥಿಗಳು ಉಪಸ್ಥಿತರಿದ್ದುರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 