ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನದ ಪ್ರಯುಕ್ತ ರಾಜ್ಯದಾದ್ಯಂತ ಸಾಂಸ್ಕೃತಿಕ ಸ್ಪರ್ಧೆಗಳು
ಕೊಪ್ಪಳ 01: ರಾಜ್ಯದೆಲ್ಲೆಡೆ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನದ ಹಿನ್ನಲೆಯಲ್ಲಿ ಜನವರಿ ತಿಂಗಳಾದ್ಯಂತ ವಿದ್ಯಾರ್ಥಿಗಳ ನಡುವೆ ನೇತಾಜಿಯವರ ಜೀವನ ಸಂಘರ್ಷ ಹಾಗೂ ಅವರ ವಿಚಾರಗಳನ್ನು ಹರಡುವ ಉದ್ದೇಶದಿಂದ ಏಐಡಿಎಸ್‌ಓ ಕೊಪ್ಪಳ ಜಿಲ್ಲಾ ಸಮಿತಿಯಿಂದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರಿ್ಡಸಲಾಗಿದೆ.
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಐಎನ್‌ಎ ಪಾತ್ರ ಈ ವಿಷಯದ ಕುರಿತು ಪ್ರಬಂಧ ಸ್ಪರ್ಧೆ, ಸ್ವರಚಿತ ಕವನ, ಚಿತ್ರಕಲೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪ್ರೌಢಶಾಲೆ, ಪಿಯು ಹಾಗೂ ಪದವಿ/ ಇಂಜಿನಿಯರಿಂಗ್/ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಎಲ್ಲ ಸ್ಪರ್ಧೆಗಳು ನಡೆಯುತ್ತವೆ.ಪ್ರತಿ ಸ್ಪರ್ಧೆಗೆ ಪ್ರತ್ಯೇಕವಾಗಿ ರೂ 10/- ಮೂರು ಸ್ಪರ್ಧೆಯಲ್ಲಿ ಭಾಗವಹಿಸುವಂತಿದ್ದರೆ ರೂ 20/- ಶುಲ್ಕ ಇರುತ್ತದೆ.ನೇತಾಜಿಯವರ ಚಿಂತನೆಗಳನ್ನು ಅರಿತು ಅವರಿಗೆ ಗೌರವ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಲು ಜಿಲ್ಲಾ ನಾಯಕರ ಸಂಖ್ಯೆಗೆ ಕರೆ ಮಾಡಿ ನೊಂದಾಯಿಸಿಕೊಳ್ಳಿ.