ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು
Cultural programs on the occasion of Makar Sankranti festival
ಹೊಸಪೇಟೆ 10: ನಾಳೆ ಹೊಸಪೇಟೆಯ ಒಂದನೇ ವಾರ್ಡ್ ಚಿತ್ತವಾಡಗಿ ಹಳೆ ಅಮರಾವತಿ ರಸ್ತೆಯಲ್ಲಿರುವ ಆಕಾಶ್ ಎಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕ್ರೀಡಾ ವಾರ್ಷಿಕೋತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಒಂದು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಪೋಷಕರು ಅತ್ಯಂತ ಸಡಗರ ಸಂಭ್ರಮದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮತ್ತು ಸ್ಥಳೀಯ ಹಬ್ಬಗಳ ಮೂಲಕ ಪಾರಂಪರಿಕ ಕ್ರೀಡೆಗಳಲ್ಲಿ ಭಾಗವಹಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಲಪನ ಗುಡಿ ಶಾಲೆಯ ದೈಹಿಕ ಶಿಕ್ಷಣದ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಯುತ ಯು ಅಶೋಕ್ ರವರು ಕಾರ್ಯಕ್ರಮ ಕುರಿತು ಮಾತನಾಡಿ ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರವನ್ನು ವಹಿಸುತ್ತದೆ ಏಕೆಂದರೆ ಕ್ರೀಡೆಗಳು ಯಾವಾಗಲೂ ಒಬ್ಬ ವ್ಯಕ್ತಿಯನ್ನು ಆರೋಗ್ಯಕರವಾಗಿ, ಸಮೃದ್ಧವಾಗಿ ಮತ್ತು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ.
ಆರೋಗ್ಯವಂತ ದೇಹದಿಂದ ಮಾತ್ರ ಮನಸ್ಸು ಆರೋಗ್ಯವಾಗಿರಲು ಸಾಧ್ಯ. ನಾವು ಎಲ್ಲಾ ಸಮಯದಲ್ಲೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ನಾವು ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಬಹುದು. ಆದ್ದರಿಂದ ಜೀವನದಲ್ಲಿ ಕ್ರೀಡೆಗಳು ಅವಶ್ಯಕ. ಕ್ರೀಡೆಗಳು ದೈಹಿಕ ಆರೋಗ್ಯ ಸುಧಾರಣೆ, ಮಾನಸಿಕ ಸಾಮರ್ಥ್ಯ ಹೆಚ್ಚಳ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಕೌಶಲ್ಯಗಳ ಬೆಳವಣಿಗೆಗೆ ಅತ್ಯಗತ್ಯ ಇವು ಶಿಸ್ತು, ಸಮಯ ನಿರ್ವಹಣೆ, ತಂಡದ ಕೆಲಸ ಮತ್ತು ನಾಯಕತ್ವದಂತಹ ಗುಣಗಳನ್ನು ಕಲಿಸುತ್ತವೆ, ಇದರಿಂದ ದೇಹ ಸದೃಢವಾಗಿ ಮತ್ತು ಮನಸ್ಸು ಚುರುಕಾಗಿರುತ್ತದೆಜೀವನ ಕ್ರಮಬದ್ಧವಾಗಿ ನಡೆಯಲು ನಮ್ಮ ದೇಹ ಆರೋಗ್ಯವಾಗಿರುವುದು ಎಷ್ಟು ಮುಖ್ಯವೋ ಅದೇ ರೀತಿ ನಮ್ಮ ದೇಹದ ಸಂಪೂರ್ಣ ಬೆಳವಣಿಗೆಗೆ ವ್ಯಾಯಾಮವೂ ಬಹಳ ಮುಖ್ಯ.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ದೇಹಕ್ಕೆ ಉತ್ತಮ ವ್ಯಾಯಾಮ ದೊರೆಯುತ್ತದೆ. ಮಕ್ಕಳು ಮತ್ತು ಯುವಕರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಇದು ಬಹಳ ಮುಖ್ಯವಾಗಿದೆ. ಕೆಲವು ಪೋಷಕರು ಕ್ರೀಡೆಗಳನ್ನು ಕೇವಲ ಮನರಂಜನೆಯ ಸಾಧನವೆಂದು ಪರಿಗಣಿಸಿ ಮಕ್ಕಳ ಕ್ರೀಡೆಗಳಲ್ಲಿ ಆಸಕ್ತಿ ವಹಿಸುವುದನ್ನು ವಿರೋಧಿಸುತ್ತಾರೆ, ಆದರೆ ಕ್ರೀಡೆಗಳು ಅಂತಹ ವ್ಯಾಯಾಮವಾಗಿದ್ದು ಅದು ನಮ್ಮ ದೈಹಿಕ ಅಂಗಗಳ ಜೊತೆಗೆ ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ.ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಆಕಾಶ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಏನ್ ಮೊಹಮ್ಮದ್ ಇಮಾಮ ನಿಯಾಜಿ ರವರು ಮಾತನಾಡಿ ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು ತಿಳಿಸಿದರು.
ನಂತರ ಮಾತನಾಡಿ ವಿದ್ಯಾರ್ಥಿಗಳು ಅನಾವಶ್ಯಕ ಸಮಯವನ್ನ ವ್ಯರ್ಥ ಮಾಡದೆ ಮೊಬೈಲ್ ಗಳಿಗೆ ಅಡಿಕ್ಟ್ ಆಗದೆ ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ದಿನನಿತ್ಯದ ಆಟ ಪಾಠ ಮತ್ತು ಉತ್ತಮ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು ಆಟ ಪಾಠ ಕ್ರೀಡೆಗಳಲ್ಲಿ ಹೆಸರು ಮಾಡಿ ಜನ್ಮ ಕೊಟ್ಟ ತಂದೆ ತಾಯಿಗಳಿಗೂ ಹಾಗೂ ಪಾಲಕರಿಗೂ ಪೋಷಕರಿಗೂ ನಿದ್ದೆ ಕಳಿಸಿದ ಶಿಕ್ಷಕರಿಗೂ ಗೌರವ ತರುವಂತ ಕೆಲಸ ಮಾಡಬೇಕೆಂದು ತಿಳುವಳಿಕೆ ಹೇಳಿದರು.
ಜೀವನದಲ್ಲಿ ಅಂಕಗಳೇ ಅಂತಿಮ ಅಲ್ಲ, ಅಂಕಗಳು ಹಾಗು ಪುರಸ್ಕಾರಗಳ ಜೊತೆಗೆ ಮಕ್ಕಳು ತಮ್ಮ ಪ್ರತಿಭೆಯನ್ನು ಅನಾವರಣಗೊಸಬೇಕು. ಇಂದು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರ ಸಾಕಷ್ಟ ಸೌಲಭ್ಯಗಳನ್ನು ಒದಗಿಸಿದೆ ಅದನ್ನು ಮಕ್ಕಳು ಸದುಪಯೋಗ ಪಡಿಸಿಕೊಂಡು ಶಿಕ್ಷಣವನ್ನು ಪೂರ್ತಿಗೊಳಿಸಬೇಕು ಯಾವುದೇ ಕಾರಣಕ್ಕೂ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬಾರದು. ಉತ್ತಮ ಸುಶಿಕ್ಷಕರಾಗಿ ಉತ್ತಮ ನಾಗರಿಕರಾಗಿ ರಾಜ್ಯದ ಅಭಿವೃದ್ಧಿಗೆ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾಗ ಬೇಕಾಗಿರುತ್ತದೆ. ಹಾಗೂ ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬ ನಾಣ್ಣುಡಿಯಂತೆ ಮಕ್ಕಳ ಒಳಗಿರುವ ಪ್ರತಿಭೆಯನ್ನು ಪಾಲಕರು ಪೋಷಕರು ಮತ್ತು ಶಿಕ್ಷಕರು ಗುರುತಿಸಿದಲ್ಲಿ ಮಾತ್ರ ಸಾರ್ಥಕವಾಗುತ್ತದೆ.
ಹಾಗೂ ಅನೇಕ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾಗಿರುವ ವಿದ್ಯಾರ್ಥಿಗಳಿಗೂ ಹಾಗೂ ಅವರ ಪಾಲಕರಿಗೂ ಪೋಷಕರಿಗೂ ಬಹುಮಾನಗಳನ್ನು ಪ್ರಶಸ್ತಿ ಪತ್ರಗಳನ್ನು ನೀಡಲಾಯಿತುಈ ಒಂದು ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಸಂಪದಾ ರವರು ಹಾಗೂ ಬೋಧಕ ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಗಳು, ಮಕ್ಕಳು ಅವರ ಪಾಲಕರು ಪೋಷಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 