ಸಿಲಿಂಡರ್ ಸ್ಪೋಟ: ಮನೆ ಸಂಪೂರ್ಣ ಜಖಂ
Cylinder explosion: House completely damaged
ತಾಳಿಕೋಟಿ 28: ಪಟ್ಟಣದ ಗಣೇಶ ನಗರದಲ್ಲಿರುವ ಹೆಸ್ಕಾಂ ಉದ್ಯೋಗಿ ರವಿ ಕೋಳೂರ ಇವರ ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಸಿಲಿಂಡರ್ ಸ್ಪೋಟಗೊಂಡಿದ್ದು ಇಡೀ ಮನೆ ಜಖಂಗೊಂಡ ಘಟನೆ ಗುರುವಾರ ನಡೆದಿದೆ.
ಪಟ್ಟಣದ ಗಣೇಶನಗರದಲ್ಲಿರುವ ಹೆಸ್ಕಾಂ ಉದ್ಯೋಗಿ ರವಿ ಕೋಳೂರ ಇವರ ಮನೆಯಲ್ಲಿ ಅಪರಾಹ್ನ ಮಧ್ಯಾಹ್ನ 1-15 ಘಂಟೆ ಸಮೀಪದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಪೋಟದ ಶಬ್ದ ಕೇಳಿ ಬಡಾವಣೆ ನಿವಾಸಿಗಳು ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ, ತಕ್ಷಣದಲ್ಲಿ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೀಗ ಹಾಕಿದ ಮನೆಯನ್ನು ತೆರೆದು ಒಳಗೆ ಪ್ರವೇಶಿಸಿ ಹಾನಿ ತಪ್ಪಿಸುವ ಕಾರ್ಯ ಮಾಡಿದ್ದಾರೆ. ಘಟನೆ ಸಂಭವಿಸಿದ ಸಮಯದಲ್ಲಿ ಮನೆಯ ಮಾಲೀಕ ರವಿ ಕೋಳೂರ, ಅವರ ಧರ್ಮಪತ್ನಿ ಹಾಗೂ ಮಕ್ಕಳು ಮನೆಯಲ್ಲಿ ಇಲ್ಲದೇ ಇರುವುದರಿಂದ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಪೋಟದ ತೀವ್ರತೆಯಿಂದಾಗಿ ಇಡೀ ಮನೆಯ ಗೋಡೆಗಳು ಬಿರುಕುಕೊಂಡಿವೆ. ಸ್ಪೋಟದಿಂದಾಗಿ ಮನೆಯಲ್ಲಿದ್ದ 3.80 ಲಕ್ಷ ನಗದು ಹಣ ಮತ್ತು ಪ್ರಮುಖ ದಾಖಲೆ ಪತ್ರಗಳು ಸುಟ್ಟು ಕರಕಲಾಗಿದ್ದು ಒಟ್ಟು ಐದು ಲಕ್ಷದಷ್ಟು ನಷ್ಟವಾಗಿದೆ ಎಂದು ಮನೆಯ ಮಾಲೀಕ ರವಿ ಕೋಳೂರ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳ ಭೇಟಿ: ಸುದ್ದಿ ತಿಳಿಯುತ್ತಿದ್ದಂತೆಯೇ ತಹಸಿಲ್ದಾರ್ ಡಾ.ವಿನಯಾ ಹೂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ವಿವರ ಪಡೆದುಕೊಂಡು ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ. ಸ್ಥಳೀಯ ಠಾಣಾ ಪಿಎಸ್‌ಐ ಜ್ಯೋತಿ ಖೋತ್ ಅವರು ಸಿಬ್ಬಂದಿಯೊಂದಿಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 