ಡಿ. ದೇವರಾಜ ಅರಸು ಜನ್ಮ ದಿನಾಚರಣೆ: ಜಿಲ್ಲಾಡಳಿತದಿಂದ ಗೌರವ ನಮನ ಸಲ್ಲಿಕೆ

ಕೊಪ್ಪಳ 20: ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಗೌರವ ನಮನ ಸಲ್ಲಿಸುವುದರ ಮೂಲಕ ಸರಳವಾಗಿ ಆಚರಿಸಲಾಯಿತು.

ರಾಜ್ಯದಲ್ಲಿ ಇತ್ತೀಚಿನ ನೆರೆ ಹಾವಳಿ ಪ್ರಯುಕ್ತ ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿಯೂ ಸರಳ ಆಚರಿಸುವಂತೆ ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು, ಇವರು ನಿದರ್ೇಶನ ನೀಡಿರುವ ಪ್ರಯುಕ್ತ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಮಂಗಳವಾರದಂದು ಸರಳವಾಗಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈರಪ್ಪ ಆಶಾಪುರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕಿ ಅಮಿತಾ ಯರಗೋಳಕರ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಗೌರವ ನಮನ ಸಲ್ಲಿಸಿದರು.