ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟಕ್ಕೆ ಡಿ.ಶ್ರಾವ್ಯ ಆಯ್ಕೆ
D. Shravya selected for taluk level in Pratibha Karanji
ಕಂಪಿ 06: ಪಟ್ಟಣದ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ನಡೆದ ಪ್ರತಿಭಾ ಕಾರಂಜಿ ಹಾಗೂ ಕಲ್ಲೋತ್ಸವದ ಛದ್ಮವೇಷ ಸ್ಪರ್ಧೆಯಲ್ಲಿ ವಿಶ್ವಕರ್ಮ ಸಮಾಜದ ತಾಲೂಕು ಕಾರ್ಯದರ್ಶಿ ಡಿ.ಮೌನೇಶ ಅವರ ಸುಪುತ್ರ ಡಿ.ಭರತ್ ಅವರ ಸುಪುತ್ರಿ ಹಾಗೂ ಚೇತನ ವಿದ್ಯಾನಿಕೇತನ ಶಾಲೆ 3ನೇ ತರಗತಿ ವಿದ್ಯಾರ್ಥಿನಿ ಡಿ.ಶ್ರಾವ್ಯಾ ಇವರು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಳ್ಳುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದ್ದಾಳೆ. ಇಲ್ಲಿನ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಶ್ರಾವ್ಯ ಇವರು ಛದ್ಮವೇಷದಲ್ಲಿ ಭಾಗವಹಿಸಿ, ಬಾಲರಾಮ(ರಾಮಲಲ್ಲಾ)ನ ವೇಷದಲ್ಲಿ ತೀರ್ುಗಾರರ ಗಮನ ಸೆಳೆದು, ಎಸ್‌ಎನ್‌ಪೇಟೆ ಕ್ಲಸ್ಟರ್‌ಯಿಂದ ತಾಲೂಕು ಮಟ್ಟಕ್ಕೆ ಆಯ್ಕೆಗೊಂಡು, ಶಾಲೆಗೆ ಕೀರ್ತಿ ತರುವ ಜೊತೆಗೆ ಪೋಷಕರ ಮನಗೆದ್ದಿದ್ದಾಳೆ. ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು ಹಾಗೂ ವಿಶ್ವಕರ್ಮ ಸಮಾಜದ ತಾಲೂಕು ಕಾರ್ಯದರ್ಶಿ ಡಿ.ಮೌನೇಶ ಅವರ ಸುಪುತ್ರ ಡಿ.ಭರತ್ ಇವರು ಪ್ರಶಂಸೆ ವ್ಯಕ್ತಪಡಿಸಿದರು. ಪ್ರಶಸ್ತಿ ವಿತರಣೆ ಸಂದರ್ಭದಲ್ಲಿ ಇಸಿಒ ರೇವಣ್ಣ, ಸಿಆರ್‌ಪಿಗಳಾದ ರೇಣುಕಾರಾಧ್ಯ, ಭೂಮೇಶ್ವರ, ಹಿರಿಯ ಶಿಕ್ಷಕ ಚಂದ್ರಶೇಖರ, ಮುಖ್ಯಗುರುಗಳಾದ ಕೆ.ವಿಷ್ಣು, ಶಿಕ್ಷಕ ಚಂದ್ರಯ್ಯ ಸೊಪ್ಪಿನಮಠ ಸೇರಿದಂತೆ ಶಿಕ್ಷಕರು ಹಾಗೂ ಮಕ್ಕಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 