ಡಿ. 29 ರಂದು ವಿಶ್ವಮಾನವ ದಿನಾಚರಣೆ ಹಾಗೂ ಜ. 1 ರಂದು ಅಮರಶಿಲ್ಪಿ ಶ್ರೀ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಧಾರವಾಡ 24: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಿಸೆಂಬರ 29 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವಮಾನವ ದಿನಾಚರಣೆ ಹಾಗೂ ಜನೆವರಿ 1 ರಂದು ಬೆಳಿಗ್ಗೆ 11 ಗಂಟೆಗೆ ಅಮರಶಿಲ್ಪಿ ಶ್ರೀ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದಿನಾಚರಣೆಗಳ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.