ಬಳ್ಳಾರಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪತ್ರಕರ್ತರ ಸಮ್ಮೆಳನದ ಸ್ಮರಣ ಸಂಚಿಕೆ ಡಿ.ಕೆ.ಶಿವಕುಮಾರ್ ರಿಂದ ಬಿಡುಗಡೆ
D.K. Shivakumar releases commemorative issue of National Journalists' Conference to be held in Bell
ಸಿರುಗುಪ್ಪ 13: ಬಿಸಿಲನಾಡು ಬಳ್ಳಾರಿಯಲ್ಲಿ ಇದೇ ಫೆಬ್ರವರಿ 19 ಮತ್ತು 20 ರಂದು ನಗರದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯ ಅಥಿತಿಗಳಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಭಾಗವಹಿಸಲಿದ್ದು, ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷರವರು ತಿಳಿಸಿದರು.
ಮಂಗಳೂರಿನ ಖಾಸಗಿ ಹೊಟೇಲ್ ಯೊಂದರಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಬಿ.ಶಿವಪೂಜಿರವರ ನೇತೃತ್ವದ ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಗಳನ್ನ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಬಳ್ಳಾರಿಯಲ್ಲಿ ಇದೇ ಫೆಬ್ರವರಿಯಲ್ಲಿ ಐತಿಹಾಸಿಕ ಪತ್ರಕರ್ತರ ರಾಷ್ಟ್ರೀಯ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ದೇಶದ 15 ರಿಂದ 18 ರಾಜ್ಯಗಳ ಪತ್ರಕರ್ತ ಪ್ರತಿನಿಧಿಗಳು ಸುಮಾರು 500 ಕ್ಕೂ ಜನ ಭಾಗವಹಿಸಲಿದ್ದು, ಎರಡು ದಿನಗಳ ಕಾಲ ಸಮ್ಮೇಳನ ಬಳ್ಳಾರಿ ನಗರದಲ್ಲಿ ಅದ್ಧೂರಿಯಾಗಿ ಜರುಗಲಿದ್ದು, ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದು, ಮುಖ್ಯ ಅಥಿತಿಗಳಾಗಿ ಬಂದು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, ಬಳ್ಳಾರಿಯಲ್ಲಿ ಎರಡು ದಿನಗಳ ಕಾಲ ಪತ್ರಕರ್ತರ ಹಬ್ಬವೇ ನಡೆಯಲಿದೆ ಎಂದರು.
ಫೆಬ್ರುವರಿ 19 ರಂದು ಮಧ್ಯಾಹ್ನ 3 ಗಂಟೆಯಿಂದ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಸಮಿತಿ ಸದಸ್ಯರನ್ನೊಳಗೊಂಡ ಎಲ್ಲಾ ತಾಲೂಕಿನ ಪದಾಧಿಕಾರಿಗಳು ಸೇರಿದಂತೆ ಕರ್ನಾಟಕದ ಓಟ್ಟು 300 ಜನ ಪತ್ರಕರ್ತರು ಭಾಗವಹಿಸದ್ದು, ಫೆಬ್ರುವರಿ 20 ರಂದು ರಾಷ್ಟ್ರೀಯ ಸಮ್ಮೇಳನ ನಡೆಯಲಿದ್ದು ದೇಶದ ಆನೇಕ ರಾಜ್ಯಗಳ ಹಲವು ಖ್ಯಾತ ಪತ್ರಕರ್ತರು ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನದ ಮೆರಗು ಹೆಚ್ಚಿಸಲಿದ್ದಾರೆ ಎಂದು ಯಾಳ್ಪಿ ವಲಿಭಾಷ ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಬಿ ಶಿವುಪೂಜಿ, ಸಂಘದ ರಾಜ್ಯ ಉಪಾಧ್ಯಕ್ಷ ಮಂಗಳೂರು ಸುರೇಶ್, ಮಂಗಳೂರು ಜಿಲ್ಲಾಧ್ಯಕ್ಷ ದತ್ತಾತ್ರಯ್ಯ ಹೆಗಡೆ, ಕೊಪ್ಪಳ ಜಿಲ್ಲಾಧ್ಯಕ್ಷ ಶರಣಪ್ಪ, ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷ ಕೆ.ಬಜಾರ್ಪ, ಸೇರಿದಂತೆ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 