ಬೈಲಹೊಂಗಲ,16 - ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ ಬೆಳಗಾವಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಆಶ್ರಯದಲ್ಲಿ ಡಿ.17 ರಂದು ಮಧ್ಯಾಹ್ನ 4ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಹಾಗೂ ನಾನಾ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭ ನಡೆಯಲಿದೆ.
ಶ್ರೀ ಕ್ಷೇತ್ರ ಕಾಗಿನೆಲೆ ಕನಕಗುರುಪೀಠದ ಶ್ರೀ ಮದಜಗದ್ಗುರು ಶ್ರೀ ರೇವಣಸಿದ್ದೇಶ್ವರ ಸಿಂಹಾಸನಾಧೀಶ್ವರ ನಿರಂಜನಾನಂದಪುರಿ ಮಹಾಸ್ವಾಮಿಗಳು, ಸಂಗೊಳ್ಳಿ ಶ್ರೀ ಗುರುಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯವಹಿಸುವರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಂಕು ಸ್ಥಾಪನೆ ನೆರವೇರಿಸುವರು. ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಸ್.ಸಿದ್ಧರಾಮಯ್ಯ ಸಮಾರಂಭ ಉದ್ಘಾಟಿಸುವರು.
ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆವಹಿಸುವರು.
ಮುಖ್ಯ ಅತಿಥಿಗಳಾಗಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ, ಸಹಕಾರ ಸಚಿವ ಬಂಡೆಪ್ಪ ಕಾಶಂಪುರ, ಅರಣ್ಯ ಸಚಿವ ಆರ್.ಶಂಕರ, ರಾಜ್ಯ ಸರಕಾರದ ಮುಖ್ಯ ಸಚೇತಕ ಗಣೇಶ ಹುಕ್ಕೇರಿ, ಎಂಎಲ್ಸಿ ಮಹಾಂತೇಶ ಕವಟಗಿಮಠ, ಗೌರಾನ್ವಿತ ಅತಿಥಿಗಳಾಗಿ ಸಂಸದರಾದ ಸುರೇಶ ಅಂಗಡಿ, ಪ್ರಭಾಕರ ಕೋರೆ, ಪ್ರಕಾಶ ಹುಕ್ಕೇರಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ, ಶಾಸಕರಾದ ಹೆಚ್.ವಿಶ್ವನಾಥ, ದುಯರ್ೋಧನ ಐಹೊಳೆ, ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಸತೀಶ ಜಾರಕಿಹೊಳಿ, ಆನಂದ ಮಾಮನಿ, ಶಶಿಕಲಾ ಜೊಲ್ಲೆ, ಪಿ.ರಾಜೀವ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ, ಅನೀಲ ಬೆನಕೆ, ಅಭಯ ಪಾಟೀಲ, ಲಕ್ಷ್ಮೀ ಹೆಬ್ಬಾಳಕರ, ಅಂಜಲಿ ನಿಂಬಾಳಕರ, ಮಹಾಂತೇಶ ದೊಡಗೌಡರ, ಮಹಾದೇವಪ್ಪ ಯಾದವಾಡ, ಎಂಎಲ್ಸಿಗಳಾದ ಅರುಣ ಶಹಾಪೂರ, ವಿವೇಕರಾವ ಪಾಟೀಲ, ಹಣಮಂತ ನಿರಾಣಿ, ಹೆಚ್.ಎಮ್.ರೇವಣ್ಣ, ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ, ತಾ.ಪಂ.ಅಧ್ಯಕ್ಷೆ ಶೈಲಾ ಸಿದ್ರಾಮನಿ, ಖಾನಾಪುರ ತಾ.ಪಂ.ಅಧ್ಯಕ್ಷೆ ನಂದಾ ಕೊಡಚವಾಡಕರ, ಸಂಗೊಳ್ಳಿ ಜಿ.ಪಂ.ಸದಸ್ಯ ಅನೀಲ ಮ್ಯಾಕಲಮರಡಿ, ನಂದಗಡ ಜಿ.ಪಂ.ಸದಸ್ಯೆ ಸುಪ್ರಿಯಾ ಕುಟ್ರೆ, ತಾ.ಪಂ.ಸದಸ್ಯರಾದ ಗೌಸಸಾಬ ಬುಡ್ಡೆಮುಲ್ಲಾ, ಅಮೀರಬಿ ತಹಶೀಲ್ದಾರ, ಸಂಗೊಳ್ಳಿ ಗ್ರಾ.ಪಂ.ಅಧ್ಯಕ್ಷೆ ಯಲ್ಲವ್ವ ಹಳೆಮನಿ, ನಂದಗಡ ಗ್ರಾ.ಪಂ.ಅಧ್ಯಕ್ಷ ಪ್ರಭು ಪರಿಶ್ವಾಡಕರ, ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದಶರ್ಿ ಮೊಹಮದ ಮೊಹಸಿನ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ರಾಕೇಶ ಸಿಂಗ್, ಬೆಳಗಾವಿಯ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ, ಬೆಳಗಾವಿ ಉತ್ತರ ವಲಯ ಆರಕ್ಷಕ ಮಹಾ ನಿರೀಕ್ಷಕ ಹೆಚ್.ಎಸ್.ರೇವಣ್ಣ, ಕ್ರಾ.ವೀ.ಸಂ.ರಾ.ಕ್ಷೇ.ಅ.ಪ್ರಾ.ವಿಶೇಷಾಧಿಕಾರಿ ಬಿ.ಎಸ್.ಶೇಖರಪ್ಪ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಧೀರಕುಮಾರ ರೆಡ್ಡಿ, ಬೆಳಗಾವಿ ಜಿ.ಪಂ.ಸಿಇಒ ರಾಮಚಂದ್ರನ್ ಆರ್., ಕ್ರಾ.ವೀ.ಸಂ.ರಾ.ಕ್ಷೇ.ಅ.ಪ್ರಾ.ಆಯುಕ್ತ ಹೊರಪೇಟೆ ಮಲ್ಲೇಶಪ್ಪ ಆಗಮಿಸುವರು.
ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ರಾಕ್ ಗಾರ್ಡನ್, ಕಲ್ಯಾಣ ಮಂಟಪ ಹಾಗೂ ನಾನಾ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.