ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಿಲ್ಲಾ ಮಟ್ಟದ ಸಭೆಯಲ್ಲಿ ಡಿಸಿ ಅಭಿಪ್ರಾಯ
DC's opinion on pension scheme for unorganized sector workers at district level meeting
ವಿಜಯನಗರ, (ಹೊಸಪೇಟೆ) 19: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ಜಿಲ್ಲೆಯ ಹತ್ತು ಸಾವಿರ ಅಸಂಘಟಿತ ಕಾರ್ಮಿಕ ಫಲಾನುಭವಿಗಳ ನೋಂದಣಿಗೆ ಗುರಿ ಹೊಂದಲಾಗಿದೆ ಎಚಿದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಸಿದರು. ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಬುಧವಾರ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಾರ್ಮಿಕ ಇಲಾಖೆ ವತಿಯಿಚಿದ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಿಲ್ಲಾ ಮಟ್ಟದ ಸಭೆ ನಡೆಸಲಾಯಿತು.
ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಚಿಢದಡಿ ರಿಕ್ಷಾ ಚಾಲಕರು, ಹಮಾಲುಗಳು, ಇಟ್ಟಿಗೆ ಭಟ್ಟಿಕಾರ್ಮಿಕರು, ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿ, ಬಿಸಿಯೂಟ ಸಿದ್ಧಪಡಿಸುವವರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು ಮುಂತಾದ ಅಸಂಘಟಿತ ಕಾರ್ಮಿಕರು ಈ ಯೋಜನೆಚಿಢದಡಿ ನೊಂದಾಯಿಸಿಕೊಳ್ಳಬಹುದು. ಕೇಂದ್ರ ಸರ್ಕಾರವು 18 ವರ್ಷ ಮೇಲ್ಪಟ್ಟ ಕಾರ್ಮಿಕರು, ಫಲಾನುಭವಿಗಳು ಪಾವತಿಸುವ ವಂತಿಕೆಗೆ ಸಮಾನಾಚಿತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. 60 ವರ್ಷ ವಚಿಢದಸ್ಸು ಪೂರ್ಣಗೊಂಡ ನಚಿತರ ತಿಂಗಳಿಗೆ ರೂ.3,000 ಖಚಿತ ಕನಿಷ್ಠ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ.
ಫಲಾನುಭವಿಗಳ 10 ವರ್ಷದೊಳಗಾಗಿ ಯೋಜನೆಯಿಚಿದ ನಿಗ್ರಿ್ಮಸಿದಲ್ಲಿ, ಈ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾದ ಮೊತ್ತಕ್ಕೆ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ. 60 ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅವರ ನಾಮಿನಿಗೆ ಮುಂದುವರೆಸಲು ಅವಕಾಶವಿದೆ. ಪಿಂಚಣಿ ಆರಂಭಗೊಂಡ ನಚಿತರ ಫಲಾನುಭವಿ ಆಕಸ್ಮಿಕವಾಗಿ ಮೃತಪಟ್ಟಲ್ಲಿ, ಅವರ ಪತ್ನಿ ಅಥವಾ ಪತಿಗೆ ಪಿಂಚಣಿಯ ಶೇ.50 ರಷ್ಟು ಪಿಂಚಣಿ ಪಡೆಯಬಹುದು. ಕಾರ್ಮಿಕರಿಗೆ ಜೀವನ ಸಚಿಧ್ಯಾಕಾಲದಲ್ಲಿ ದುಡಿದು ತಮ್ಮನ್ನು ತಾವು ಪೋಷಿಸಲು ದೈಹಿಕವಾಗಿ, ಆರ್ಥಿಕ ಸದೃಢರಾಗಿರುವುದಿಲ್ಲ. ಆದ್ದರಿಂದ ಹಿರಿಯ ನಾಗರೀಕರ ಭದ್ರತೆ ಕಲ್ಪಿಸುವ ಸಲುವಾಗಿ ಮಹತ್ವಾಕಾಂಕ್ಷಿ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಚಿದು ಡಿಸಿ ಕವಿತಾ ಎಸ್. ಮನ್ನಿಕೇರಿ ಸಲಹೆ ನೀಡಿದರು.
ಯೋಜನೆಚಿಢದ ಫಲಾನುಭವಿಗಳಾಗಬೇಕಾದರೆ ಅಸಂಘಟಿತ ವಲಯದ ಕಾರ್ಮಿಕರಾಗಿರಬೇಕು. 18 ರಿಂದ 40 ವರ್ಷದೊಳಗಿರಬೇಕು. ಮಾಸಿಕ ಆದಾಯ ರೂ.15,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಎನ್.ಪಿ.ಎಸ್ ಹಾಗೂ ಆದಾಯ ತೆರಿಗೆ, ಇ.ಎಸ್.ಐ. ಮತ್ತು ಪಿ.ಎಫ್ ಯೋಜನೆಚಿಢದ ವ್ಯಾಪ್ತಿಗೆ ಒಳಪಟ್ಟಿರಬಾರದು. ಅಚಿತಹ ಅಸಂಘಟಿತ ಕಾರ್ಮಿಕರು ಅಗತ್ಯ ದಾಖಲಾತಿಗಳೊಂದಿಗೆ ಹತ್ತಿರದ ಕಾಮನ್ ಸರ್ವಿಸ್ ಸೆಚಿಟರ್ ಮೂಲಕ ನೋಂದಾಯಿಸಿಕೊಳ್ಳಬಹುದು. ನೊಂದಣಿಗೆ ಯಾವುದೇ ಶುಲ್ಕ ಭರಿಸುವಚಿತಿಲ್ಲ. ಒಚಿದು ವೇಳೆ ಶುಲ್ಕ ಪಡೆಯುವುದು ಗಮನಕ್ಕೆ ಬಂದಲ್ಲಿ ಸಂಬಂಧಪಟ್ಟವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಚಿದು ಎಚ್ಚರಿಕೆ ನೀಡಿದರು.
ಇದೇ ಸಚಿದರ್ಭದಲ್ಲಿ ಸಾಂಕೇತಿಕವಾಗಿ ಅಸಂಘಟಿತ ಕಾರ್ಮಿಕರಿಗೆ ನೊಂದಣಿ ಪತ್ರ ನೀಡಲಾಯಿತು. ಈ ವೇಳೆ ಜಿ.ಪಂ. ಸಿಇಓ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಪ ಡೊಂಬರ ಮತ್ತೂರ್ ಸ್ಭೆರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 