ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಖಡಕ್ ಸೂಚನೆ
DC Nagendra Prasad K Khadak's instructions at the district level bankers' workshop
ಲೋಕದರ್ಶನ ವರದಿ
ಬಳ್ಳಾರಿ 10: ಸಾರ್ವಜನಿಕರಿಗೆ ಅರ್ಹತೆ ಮಾನದಂಡಗಳಡಿ ಸಾಲ-ಸೌಲಭ್ಯ ನೀಡಬೇಕು. ಬ್ಯಾಂಕ್ ಸೌಲಭ್ಯ ನೀಡುವಲ್ಲಿ ವಿಳಂಬವಾದಲ್ಲಿ ಆಯಾ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಸೌಲಭ್ಯ ಪಡೆಯುವಲ್ಲಿ ಬಳ್ಳಾರಿ ಜಿಲ್ಲೆ ಕಡಿಮೆ ಪ್ರಗತಿ ಸಾಧಿಸಿದೆ. ರಾಜ್ಯದ ಇತರೆ ಜಿಲ್ಲೆಗಳು ಹೆಚ್ಚು ಹೆಚ್ಚು ಪ್ರಗತಿ ಸಾಧಿಸುವಲ್ಲಿ ಯಶಸ್ವಿಯಾಗಿವೆ. ಮುಂಬರುವ ದಿನಗಳಲ್ಲಿ ಬಳ್ಳಾರಿ ಜಿಲ್ಲಿಯೂ ಪ್ರಗತಿ ಸಾಧಿಸುವಲ್ಲಿ ಬ್ಯಾಂಕ್ ಗಳ ಸಹಕಾರ ಅತಿ ಅಗತ್ಯವಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಸ್ವ- ಸಹಾಯ ಗುಂಪುಗಳ ಸಾಲ ಸಂಪರ್ಕ ಮತ್ತು ಸ್ವ ಸಹಾಯ ಗುಂಪುಗಳ ಸದಸ್ಯರುಗಳ ವೈಯಕ್ತಿಕ ಉದ್ಯಮ ಹಣಕಾಸು ಮತ್ತು ಇತರೆ ಹಣಕಾಸು ಸೇರೆ್ಡಗೆ ಸಂಬಂಧಪಟ್ಟ ಯೋಜನೆಗಳ ಅನುಷ್ಠಾನಕ್ಕೆ ಸಾಲ-ಸೌಲಭ್ಯ ಅತ್ಯಾವಶ್ಯಕವಾಗಿದೆ ಎಂದು ಅವರು ಹೇಳಿದರು.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯ ನಿವೃತ್ತ ಡಿಜಿಎಂ ಹಾಗೂ ಹೈದರಾಬಾದ್ ಎನ್.ಐ.ಆರ್.ಡಿ.ಪಿ.ಆರ್ ರಾಷ್ಟ್ರ ಸಂಪನ್ಮೂಲ ವ್ಯಕ್ತಿ ಕೊಟಗೇರಿ ಶ್ರೀನಿವಾಸ್ ರಾವ್ ಅವರು ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಉಳಿತಾಯ ಖಾತೆ, ವೈಯಕ್ತಿಕ ಸಾಲ ಮತ್ತು ಗುಂಪು ಸಾಲದ ಕುರಿತು ಬ್ಯಾಂಕ್ ವ್ಯವಸ್ಥಾಪಕರಿಗೆ ಸವಿವರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ನಬಾರ್ಡ್ ನ ಡಿಡಿಎಂ ಯುವರಾಜ್, ಕೆನರಾ ಬ್ಯಾಂಕ್ ನ ಎಲ್‌ಡಿಎಂ ಗೀರೀಶ್ ಕುಲಕರ್ಣಿ ಸೇರಿದಂತೆ ಎನ್.ಆರ್.ಎಲ್.ಎಂ ಯೋಜನೆಯ ಸಿಬ್ಬಂದಿಗಳು, 180 ಕ್ಕೂ ಹೆಚ್ಚು ಬ್ಯಾಂಕ್ ವ್ಯವಸ್ಥಾಪಕರು, 80 ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸಂಪನ್ಮೂಲ ವ್ಯಕ್ತಿಗಳು ಹಾಗೂ ಇತರರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 