ಪ್ರಜಾಸೇವೆ ಅರ್ಜಿಗಳ ವಿಲೇವಾರಿಗೆ ಡಿಸಿ ಸೂಚನೆ
DC directs disposal of public service applications
ಲೋಕದರ್ಶನ ವರದಿ
ಗದಗ ಸೆ.9: ಸೆ.5ರಂದು ಜಿಲ್ಲಾದ್ಯಂತ ನಡೆದ ಪ್ರಜಾಸೇವೆ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ ಎಲ್ಲ ಅರ್ಜಿಗಳನ್ನು ಆದ್ಯತೆ ಮೇರೆಗೆ ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಿ, ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎರಡು ದಿನಗಳಲ್ಲಿ ಐಪಿಜಿಆರ್ಎಸ್ ಪೋರ್ಟಲ್ನಲ್ಲಿ ಒಟ್ಟು 1,642 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 489 ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ. ಬಾಕಿ ಅರ್ಜಿಗಳನ್ನು ಒಂದು ವಾರದೊಳಗೆ ವಿಲೇವಾರಿ ಮಾಡುವಂತೆ ಸೂಚಿಸಿದರು.
ಹೊಸ ಕಾಮಗಾರಿ ಹಾಗೂ ಯೋಜನೆಗಳಿಗೆ ಸಂಬಂಧಿಸಿದ ಮನವಿಗಳಿದ್ದಲ್ಲಿ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿ ಅನುದಾನ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ಅರ್ಜಿಗಳ ಪರೀಶೀಲನೆ ಮತ್ತು ವಿಲೇವಾರಿಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸದೆ ಶೇ.100ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಜಾಸೇವೆ ಆಂದೋಲನದ ಅರ್ಜಿಗಳು ಸಂಬಂಧಿಸಿದ ಇಲಾಖೆಗಳ ಲಾಗಿನ್ಗೆ ವರ್ಗಾವಣೆಯಾಗಿದ್ದು, ಅಧಿಕಾರಿಗಳು ತಮ್ಮ ಲಾಗಿನ್ ಪರೀಶೀಲಿಸಿ ಕ್ರಮಕೈಗೊಳ್ಳಬೇಕು. ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವಂತೆ ತಿಳಿಸಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಈ ಮಹತ್ವದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 