ರಾಸಾಯನಿಕ ವಿಪತ್ತು ತಡೆಗೆ ವಿಶೇಷ ಕಾಳಜಿ ವಹಿಸಲು ಡಿಸಿ ಸೂಚನೆ
ಹಾವೇರಿ07: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪಾಯಕಾರಿ ಕಾಯರ್ಾಚರಣೆ ಹೊಂದಿರುವ ಕಾಖರ್ಾನೆಗಳ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆ ಜರುಗಿತು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಖರ್ಾನೆಗಳ ಸಂಭವನೀಯ ರಾಸಾಯನಿಕ ವಿಪತ್ತುಗಳ ತಡೆಗೆ ವಿಶೇಷ ಕಾಳಜಿ, ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಕಾಖರ್ಾನೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳು ಸಂಭವಿಸಬಾರದು. ಅಪಾಯಕಾರಿಯಾದ ರಾಸಾಯನಿಕ ಪದಾರ್ಥಗಳ ಬಳಕೆಯಿಂದ ಯಾವುದೇ ತರದ ಅವಘಡಗಳು ಜರುಗದಂತೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು. ವೈಜ್ಞಾನಿಕವಾಗಿ ಸಂಭವನೀಯ ಅವಘಡಗಳನ್ನು ತಡೆಯುವಲ್ಲಿ ಕೈಗೊಳ್ಳಬೇಕಾದ ತುತರ್ು ಕ್ರಮಗಳ ಕುರಿತಂತೆ ಸೂಕ್ತ ತರಬೇತಿ, ಉಪಕರಣಗಳು ಸೇರಿದಂತೆ ವಿಪತ್ತು ಯೋಜನೆಗಳನ್ನು ರೂಪಿಸಿಕೊಂಡು ಸದಾ ಸನ್ನದ್ಧರಾಗುವಂತೆ ಕಾಖರ್ಾನೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅತೀ ಹೆಚ್ಚು ಪರಿಣಾಮ ಬೀರುವ ರಾಸಾಯನಿಕ ಬಳಕೆಯ ಕಾಖರ್ಾನೆಗಳನ್ನು ಗುರುತಿಸಿಕೊಳ್ಳಬೇಕು. ಕಾಲಕಾಲಕ್ಕೆ ತಪಾಸಣೆ ನಡೆಸಬೇಕು.
ಅಪಘಾತ ತಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಕುರಿತಂತೆ ಪರಿಶೀಲನೆ, ವಿಪತ್ತು ತಡೆಯ ಪಡೆಯ ಮಾನವ ಸಂಪನ್ಮೂಲ, ಉಪಕರಣಗಳ ಸಿದ್ಧತೆ ಹಾಗೂ ಅಪಾಯಕಾರಿ ಸ್ಥಳದಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಕುರಿತಂತೆ ಕಾಖರ್ಾನೆಗಳು, ಬಾಯ್ಲರ್ಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಸಹಾಯಕ ನಿದರ್ೆಶಕಿ ಚಿನ್ಮಯಿ ತೋರ್ಗಲ್ ಹಾಗೂ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಸೀಂ ಕಂಪನಿಯಲ್ಲಿ ಬಳಕೆಮಾಡುತ್ತಿರುವ ಅಪಾಯಕಾರಿ ಕೆಮಿಕಲ್ಗಳ ಸುರಕ್ಷತಾ ನಿರ್ವಹಣೆ ಕುರಿತಂತೆ ಗರಿಷ್ಠ ಎಚ್ಚರ ವಹಿಸಲು ಸೂಚನೆ ನೀಡಿದರು.
ಕ್ಲೋರಿನ್ ದಾಸ್ತಾನು, ಕಾರ್ಬನ್ ಸಲ್ಪೇಟ್ಗಳ ದಾಸ್ತಾನು ಪ್ರಮಾಣ ಹಾಗೂ ನಿರ್ವಹಣೆಯನ್ನು ಮಾರ್ಗಸೂಚಿ ಅನುಸಾರ ಕೈಗೊಳ್ಳಬೇಕು. ಸುರಕ್ಷತಾ ನಿರ್ವಹಣೆಯ ಅಧಿಕಾರಿಗಳ ಆರೋಗ್ಯ ಹಾಗೂ ದಾಸ್ತಾನು ಸ್ಥಳದ ಸುರಕ್ಷತೆ ಕುರಿತಂತೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಆಕಸ್ಮಿಕ ಅವಘಡ ಸಂಭವಿಸಿದರೆ ಬಾಧಿತವಾಗುವ ಹಳ್ಳಿಗಳ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಕುರಿತಂತೆ ಜಾಗೃತಿ ಮೂಡಿಸಬೇಕು. ಸ್ಥಳೀಯ ಸಂಘ-ಸಂಸ್ಥೆಗಳು ನಾಗರಿಕರು, ಸ್ಥಳೀಯ ಗ್ರಾಮ ಪಂಚಾಯತಿಗಳ ಸಹಯೋಗದಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು ಹಾಗೂ ಕಾಖರ್ಾನೆಯಲ್ಲಿ ಮಾಕ್ ಡ್ರೀಲ್ ಮೂಲಕ ವಿಪತ್ತು ನಿರ್ವಹಣೆಯ ಅಣುಕು ಕಾಯರ್ಾಗಾರವನ್ನು ಕನಿಷ್ಠ ವರ್ಷಕ್ಕೆ ಎರಡುಬಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ನಗರಸಭೆ ಪರಿಸರ ಅಧಿಕಾರಿಗಳು, ಕೃಷಿ ಇಲಾಖೆ ಜಂಟಿ ನಿದರ್ೆಶಕರು, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಗ್ರಾಸೀಂ ಕಾಖರ್ಾನೆಯ ಅಧಿಕಾರಿಗಳು ಒಳಗೊಂಡಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 