ಹಾವೇರಿ15: ಕನರ್ಾಟಕ ಸಕರ್ಾರ ವಾಣಿಜ್ಯ ಬ್ಯಾಂಕಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಲು ಹೊಸ ತಂತ್ರಾಂಶ ರೂಪಿಸಿದೆ. ಈ ತಂತ್ರಾಂಶದಲ್ಲಿ ಬೆಳೆಸಾಲ ಮಾಡಿದ ರೈತರು ದಾಖಲೆಗಳೊಂದಿಗೆ ನೋಂದಣಿ ಮಾಡಿಕೊಳ್ಳಲು ಸಕರ್ಾರ ಮಾರ್ಗಸೂಚಿ ಪ್ರಕಟಿಸಿದೆ. ಜಿಲ್ಲೆಯ ರೈತರು ಈ ಕೆಳಗಿನ ಮಾರ್ಗಸೂಚಿಯಂತೆ ನಿಯಮಾವಳಿ ಅನುಸರಿಸಿ ಬೆಳೆ ಸಾಲ ಮನ್ನಾ ಯೋಜನೆ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಮನವಿ ಮಾಡಿಕೊಂಡಿದ್ದಾರೆ.
ಬೆಳೆ ಸಾಲ ಮನ್ನಾ ಯೋಜನೆಯಡಿ ನೋಂದಾಯಿಸಿಕೊಳ್ಳಲು ದಿನಾಂಕ: 31-12-2017 ರೊಳಗಾಗಿ ಬೆಳೆ ಸಾಲ ಪಡೆದ ಪ್ರತಿಯೊಬ್ಬ ರೈತರು ತಾವು ಸಾಲ ಪಡೆದ ವಾಣಿಜ್ಯ ಬ್ಯಾಂಕಗಳಿಗೆ ಬಂದು ದಿನಾಂಕ: 13-12-2018 ರಿಂದ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಈ ಯೋಜನೆಯಡಿ ರೈತರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಸಾಕಷ್ಟು ಸಮಯಾವಕಾಶ ನೀಡಿದ್ದು, ಸದರಿ ಯೋಜನೆಗೆ ಹೆಸರು ನೋಂದಾಯಿಸಲು ಡಿ.14 ರಿಂದ ಡಿ.28ರ ವರೆಗೆ ನಿಗದಿಪಡಿಸಿದೆ.
ನೋಂದಾವಣಿ ಕಾಲಾವಧಿಯಲ್ಲಿ ಬ್ಯಾಂಕುಗಳ ಕಾರ್ಯವೇಳೆ ಯಾವುದೇ ದಿನಗಳಲ್ಲಿ ರೈತರು ಸಾಲ ಪಡೆದ ಬ್ಯಾಂಕ್ ಶಾಖೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ಪ್ರತಿಯೊಬ್ಬ ಬೆಳೆ ಸಾಲ ಪಡೆದ ರೈತರು ಕಡ್ಡಾಯವಾಗಿ ತಮ್ಮ ಆಧಾರ ಕಾರ್ಡ, ರೇಷನ್ ಕಾರ್ಡ ನಕಲು ಪ್ರತಿಗಳನ್ನು ಮತ್ತು ತಾವು ಸಾಲ ಪಡೆದ ಸವರ್ೆ ನಂಬರಿನ ಮಾಹಿತಿ ತಪ್ಪದೇ ಸಲ್ಲಿಸುವುದು (ಪಹಣಿ ಪತ್ರಿಕೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ).
ಒಂದು ಬ್ಯಾಂಕ ಶಾಖೆಯಲ್ಲಿ ಪ್ರತಿ ದಿನ ಕನಿಷ್ಠ 40 ರೈತರ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ತದನಂತರ ರೈತರಿಗೆ ಕ್ರಮಬದ್ಧವಾಗಿ ಕ್ರಮಸಂಖ್ಯೆ ಮತ್ತು ದಿನಾಂಕ ನಮೂದಿಸಿ, ಟೋಕನ್ ಗಳನ್ನು ನೀಡಿದ ದಿನಾಂಕಗಳಂದು ರೈತರು ಬ್ಯಾಂಕ್ ಶಾಖೆಗೆ ತೆರಳಿ ರೈತರ ಸ್ವಯಂ ಧೃಡೀಕರಣ ಪತ್ರದೊಂದಿಗೆ ಆಧಾರ್ ಕಾರ್ಡ, ಪಡಿತರ ಚೀಟಿಗಳ ನಕಲು ಮತ್ತು ಭೂಮಿಯ ಸವರ್ೆ ನಂಬರ್ ವಿವರಗಳನ್ನು ಒದಗಿಸಬೇಕು.
ಬೆಳೆ ಸಾಲ ಮನ್ನಾ ಯೋಜನೆಯ ಲಾಭ ಪಡೆಯಲು ಈ ಕೆಳಕಂಡ ಅರ್ಹತೆಗಳನ್ನು ಸರಕಾರದಿಂದ ನಿಗದಿಪಡಿಸಿದೆ. ದಿ. 1-4-2009 ರಂದು ಮತ್ತು ನಂತರದ ದಿನಗಳಲ್ಲಿ ಮಂಜೂರಾದ ಬೆಳೆಸಾಲಗಳು ಮತ್ತು 31-12-2017ರ ವರೆಗೆ ಬಾಕಿ ಇರುವ ಬೆಳೆ ಸಾಲಗಳು (ಅಂದರೆ ಸುಸ್ತಿಸಾಲ, ಪುನರಾವಸ್ತಿ ಸಾಲ, ಎನ್.ಪಿ.ಎ (ಓಠಟಿ ಕಜಡಿಜಿಠಡಿಟಟಿರ ಂಜಣ) ಸಾಲಗಳು ಅರ್ಹವಾಗಿರುತ್ತವೆ). ಕೇವಲ ವೈಯಕ್ತಿಕ ಬೆಳೆಸಾಲ ಪಡೆದ ರೈತರು ಮಾತ್ರ ಅರ್ಹರಿರುತ್ತಾರೆ.
ಒಂದು ಕುಟುಂಬವು (ಅಂದರೆ ಗಂಡ+ಹೆಂಡತಿ+ ಅವಲಂಬಿತ ಮಕ್ಕಳು) ಗರಿಷ್ಟ ರೂ.2.00 ಲಕ್ಷದವರೆಗೆ ಮಾತ್ರ ಬೆಳೆ ಸಾಲ ಮನ್ನಾ ಪಡೆಯಲು ಅರ್ಹರಿರುತ್ತಾರೆ (ಇದಕ್ಕಾಗಿ ದಿನಾಂಕ: 5-7-2018ಕ್ಕಿಂದ ಮುಂಚಿತವಾಗಿ ಪಡೆದ ರೇಷನ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸುವುದು. ಅವುಗಳನ್ನು ಮಾತ್ರ ಪರಿಗಣಿಸಲಾಗುವುದು).
ಯಾವ ರೈತರು ವಾಷರ್ಿಕ ಆದಾಯ ತೆರಿಗೆ ಪಾವತಿದಾರರೋ ಮತ್ತು ರಾಜ್ಯ, ಕೇಂದ್ರ ಸರಕಾರಿ, ಅರೆ ಸರಕಾರಿ, ಸರಕಾರದಿಂದ ಅನುದಾನಕ್ಕೊಳಪಡುವ ಸಂಸ್ಧೆಗಳಲ್ಲಿ, ಸಾರ್ವಜನಿಕ ಸ್ವಾಮ್ಯದಲ್ಲಿ (ಕಖಗ-ಕಣಛಟಛಿ ಖಜಛಿಣಠಡಿ ಗಟಿಜಜಡಿಣಚಿಞಟಿರ) ಕಾರ್ಯನಿರ್ವಹಿಸುತ್ತಿರುವ ನೌಕರರು ಈ ಬೆಳೆಸಾಲ ಮನ್ನಾ ಯೋಜನೆಯಡಿ ಅರ್ಹರಿರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಪ್ರತಿ ಮಾಹೆ ರೂ.15,000/- (ಹದಿನೈದು ಸಾವಿರ ಮಾತ್ರ) ಕ್ಕಿಂತ ಹೆಚ್ಚು ಪಿಂಚಣಿ ಪಡೆಯುವ ನಿವೃತ್ತ ನೌಕರರು ಈ ಯೋಜನೆಯಡಿ ಅರ್ಹರಿರುವುದಿಲ್ಲ. (ಈ ಮಿತಿಯು ಮಾಜಿ ಸೈನಿಕರಿಗೆ ಅನ್ವಯಿಸುವುದಿಲ್ಲ).
ಪ್ರತಿ ಬ್ಯಾಂಕ್ ಶಾಖೆಯಲ್ಲಿ ಒಬ್ಬ ಕಂದಾಯ ಇಲಾಖೆಯ ನೌಕರ ಹಾಗೂ ಪೊಲೀಸ್ ಬಂದೋಬಸ್ತನ್ನು ಕೂಡ ನೀಡಲಾಗಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸಲು ಕೋರಿದೆ. ರೈತರಿಗೆ ಯಾವುದಾದರೂ ಗೊಂದಲ/ ಸಂದೇಹಗಳಿದ್ದಲ್ಲಿ ಜಿಲ್ಲಾಧಿಕಾರಿಗಳು ಹಾವೇರಿ ಕಛೇರಿಯ ಸಹಾಯವಾಣಿ ಸಂಖ್ಯೆ: 08375-249102 ಗೆ ಸಂಪಕರ್ಿಸಿ, ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಕೋರಲಾಗಿದೆ.