ಡಿಸಿಸಿ ಬ್ಯಾಂಕ್ 7 ನಿರ್ದೇಶಕರ ಸ್ಥಾನಕ್ಕೆ 19ರಂದು ಚುನಾವಣೆಗೆ ಸಕಲ ಸಿದ್ದತೆ
DCC Bank all set for elections for 7 director posts on the 19th
ಡಿಸಿಸಿ ಬ್ಯಾಂಕ್ 7 ನಿರ್ದೇಶಕರ ಸ್ಥಾನಕ್ಕೆ 19ರಂದು ಚುನಾವಣೆಗೆ ಸಕಲ ಸಿದ್ದತೆ
ಬೆಳಗಾವಿ : ನಗರದ ಬಿ.ಇ.ಸಂಸ್ಥೆಯ ಬಿಕೆ ಮಾಡೆಲ್ ಹೈಸ್ಕೂಲ್‌ನಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 7 ನಿರ್ದೇಶಕರ ಸ್ಥಾನಗಳಿಗೆ ರವಿವಾರ ಅ. 19ರಂದು ಮತದಾನ ನಡೆಯಲಿದ್ದು, ಮತದಾನಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಒಟ್ಟು 676 ಮತದಾರರು ಮತದಾನ ಹಕ್ಕು ಚಲಾಯಿಸಲಿದ್ದಾರೆ. ಅದೇ ದಿನ ಸಂಜೆ ಮತ ಎಣಿಕೆ ಜೊತೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಬಿಡಿಸಿಸಿ ಬ್ಯಾಂಕ್ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಶ್ರವಣ ನಾಯಕ್ ಅವರು ಇಂದಿಲ್ಲಿ ಹೇಳಿದರು.
ಶುಕ್ರವಾರ ಮಧ್ಯಾಹ್ನ ಬೆಳಗಾವಿಯ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕಿನ್ ಒಟ್ಟು 16 ಸ್ಥಾನಗಳ ಪೈಕಿ ಈಗಾಗಲೇ, 9 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿವೆ. ಇನ್ನುಳಿದ 7 ತಾಲೂಕಿನ ಪಿಕೆಪಿಎಸ್ ಮತಕ್ಷೇತ್ರಗಳಿಗೆ ಆಯ್ಕೆ ಬಯಸಿ 14 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಇದೇ ರವಿವಾರ 19ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, 7 ಮತಗಟ್ಟೆಗಳನ್ನು ಸ್ತಾಪಿಸಲಾಗಿದೆ. 7 ಮತದಾನ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕಯೊಂದಿಗೆೆ ವಿಶೇಷ ನಿಗಾ ವಹಿಸಲಾಗುತ್ತಿದೆ, ಮತದಾನದ ಕೇಂದ್ರದ ಹೊರಗೆ ಹಾಗೂ ಒಳಗೆ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರ ನೇತೃತ್ವದಲ್ಲಿ ಪೊಲೀಸ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದರು.
ಮತದಾನಕ್ಕೆ ಆಗಮಿಸುವ ಮತದಾರರು ಕಡ್ಡಾಯವಾಗಿ ತಮ್ಮ ಗುರುತಿನ ಚೀಟಿ ತೆಗೆದುಕೊಂಡು ಬರಬೇಕು. ಮತಗಟ್ಟೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಮತದಾರರು ಮತದಾನ ಕೇಂದ್ರಗಳಲ್ಲಿ ಪೆನ್ನು, ಪೆನ್ಸಿಲ್ ಸೇರಿದಂತೆ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಬರಲು ಅವಕಾಶ ಇರುವುದಿಲ್ಲ. ನಿಯಮಾನುಸಾರ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು, ಮತದಾನದ ಬಳಿಕ ಅದೇ ದಿನ ಸಂಜೆ ಮತ ಎಣಿಕೆ ಕಾರ‌್ಯ ನಡೆಯಲಿದೆ. ಅದೇ ದಿನ ಚುನಾಯಿತರಾದ ಅಭ್ಯರ್ಥಿಗಳ ಹೆಸರು ಘೋಷಿಸಲಾಗುವುದು. ಚುನಾಯಿತ ಅಭ್ಯರ್ಥಿ ಜೊತೆಗೆ ಐದು ಜನರ ಬೆಂಬಲಿಗರೊಂದಿಗೆ ಬಂದು ಪ್ರಮಾಣ ಪತ್ರ ಸ್ವೀಕರಿಸಲು ಅವಕಾಶ ಇದೆ ಎಂದು ವಿವರಿಸಿದರು.
ಚುನಾವಣಾ, ಸಿಬ್ಬಂದಿಗಳು ಏಜೆಂಟರು ಹಾಗೂ ಅಧಿಕೃತ ಪಾಸ್ ಪಡೆದ ಮಾಧ್ಯಮದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮತದಾನ ಹಾಗೂ ಮತ ಎಣಿಕೆ ಪ್ರಕ್ರಿಯೆಗೆ ಎಲ್ಲ ಅಭ್ಯರ್ಥಿಗಳಿಗೂ ತಲಾ ಒಬ್ಬರೇ ಏಜೆಂಟರು ಇರಬೇಕು. ಅಭ್ಯರ್ಥಿಗಳು, ಚುನಾವಣೆ ಅಧಿಕಾರಿಗಳು ಹಾಗೂ ಮಾಧ್ಯಮದವರು ಸೇರಿದಂತೆ ಒಳಗಿರುವ ಎಲ್ಲರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಸೌಲಭ್ಯ ಕಲ್ಪಿಸಲಾಗಿದೆ. ಜೊತೆಗೆ ವೇದಿಕೆಯ ಸಿಬ್ಬಂದಿ, ಅಂಬುಲೆನ್ಸ್, ಅಗ್ನಿಶಾಮಕ ಇಲಾಖೆಯ ವ್ಯವಸ್ಥೆಯು ಇರಲಿದೆ. ಚುನಾವಣೆ ಕಾರ್ಯಕ್ಕಾಗಿ ಒಟ್ಟು 33 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅವರಿಗೆ ಅಗತ್ಯ ತರಬೇತಿ ನೀಡಲಾಗಿದೆ. ಮತದಾನದ ಕೇಂದ್ರ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು
7 ಕ್ಷೇತ್ರಗಳಲ್ಲಿ 698 ಪಿಕೆಪಿಎಸ್‌ಗಳಿದ್ದು, ವಿವಿಧ ಕಾರಣಗಳಿಂದಾಗಿ ಕೆಲವು ಪಿಕೆಪಿಎಸ್ ಮತದಾನದ ಹಕ್ಕು ಕಳೆದುಕೊಂಡಿವೆ. ಠರಾವು ಪಾಸ್ ಮಾಡಿಕೊಂಡು ಮತದಾನದ ಹಕ್ಕು ಪಡೆದ ಒಟ್ಟು 676 ಮತದಾರರು ಮತದಾನ ಮಾಡಲಿದ್ದಾರೆ. ಕೆಲವು ಪಿಕೆಪಿಎಸ್‌ಗಳು ಮತದಾನದ ಹಕ್ಕು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಆದರೆ, ನ್ಯಾಯಾಲಯದಿಂದ ನಮಗೆ ಈ ವರೆಗೂ ಯಾವುದೇ ನಿರ್ದೇಶನ ಬಂದಿಲ್ಲ. ಒಂದು ವೇಳೆ ಹಾಗೇನಾದರೂ ನಿರ್ದೇಶನ ಬಂದರೂ, ಆದೇಶವನ್ನು ಪಾಲಿಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಚುನಾವಣಾಧಿಕಾರಿ ಶ್ರವಣ ನಾಯ್ಕ ಅವರು ಉತ್ತರಿಸಿದರು. ಇಂದಿನ ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಇಲಾಖೆಯ ಉಪ ನಿಬಂಧಕ ರವೀಂದ್ರ ಪಾಟೀಲ ಹಾಗೂ ಡಿಸಿಸಿ ಬ್ಯಾಂಕ್ ಸಿಇಒ ಎನ್.ಜಿ.ಕಲಾವಂತ್ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 