ಬೆಂಗಳೂರು 29: ವೈಯಕ್ತಿಕವಾಗಿ ಆರೋಪ ಮಾಡಿದ್ದಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯಥರ್ಿ ಡಿ.ವಿ.ಸದಾನಂದ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಟ್ವಿಟರ್ ಮೂಲಕ ಟಾಂಗ್ ನೀಡಿದ್ದಾರೆ. ಹೌದು ನನ್ನದು ನಗು ಮುಖ, ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ. ಅದಕ್ಕೆ ನಾನು ನಗು ಮುಖದಲ್ಲಿ ಇರುತ್ತೇನೆ. ಗಂಡನನ್ನು ಕಳೆದುಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ. ಅಧಿಕಾರಕ್ಕೋಸ್ಕರ ಬದುಕಿ ಬಂದ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡು ಹೀನವಾಗಿ ಬದುಕುವ ಜಾಯಮಾನ ನನ್ನದಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದನಾಗಿ ನಾನೇನು ಮಾಡಿದ್ದೇನೆ ಎಂದು ನನ್ನ ಜನರಿಗೆ ಗೊತ್ತಿದೆ. ಸಾಂದಭರ್ಿಕ ಮೈತ್ರಿ ಮಾಡಿಕೊಂಡು ಜನರನ್ನು ಏಮಾರಿಸಲು ಹೊರಟ ಹಗಲು ವೇಷಗಾರರಿಗೆ ಮನದಟ್ಟು ಮಾಡುವ ಅಗತ್ಯ ನನಗಿಲ್ಲ. ನಮ್ಮೊಂದಿಗೆ ಮೋದಿಯಂತಹ ಮೋದಿಜಿಯವರಿದ್ದಾರೆ. ಮೋದಿಜಿಯವರ ಜೊತೆಗಿದ್ದರೆ ದೇಶ ಸುರಕ್ಷಿತ ಎನ್ನುವ ಕೋಟಿ ಕೋಟಿ ಜನರಿದ್ದಾರೆ. ನೀವು ಎದೆಯುಬ್ಬಿಸಿ 2/3 ಹೇಳಿಕೊಳ್ಳುವಂತಹ ನಿಷ್ಕಳಂಕ ಚಾರಿತ್ರ್ಯದ ಒಬ್ಬನೇ ಒಬ್ಬ ನಾಯಕ ನಿಮ್ಮಲ್ಲಿದ್ದಾನೆ ಎನ್ನುವ ಛಾತಿ ನಿಮಗಿದೆಯಾ ? ರಾಜಕೀಯವನ್ನು ರಾಜಕೀಯವಾಗಿ ನಡೆಸಿ, ವೈಯಕ್ತಿಕ ನಿಂದನೆ ನಿಮ್ಮ ತೂಕವನ್ನು ಅಳೆಯುತ್ತದೆ ಎನ್ನುವ ಭಾವನೆ ನಿಮಗಿರಲಿ. ಜನ ಗಮನಿಸುತ್ತಾರೆಂಬ ಕನಿಷ್ಠ ಪ್ರಜ್ಞೆ ಕೂಡ ಇರಲಿ ಎಂದು ಮೈತ್ರಿ ಪಕ್ಷದ ಮುಖಂಡರಿಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸದಾನಂದ ಗೌಡ ಅವರ ವಿರುದ್ಧ ಚುನಾವಣಾ ಪ್ರಚಾರ ಸಭೆಯಲ್ಲಿ ಟೀಕಿಸಿದ್ದರಿಂದ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.