ಕೊಳಗೇರಿ ಜನರ ಸಂಕಷ್ಟ ಆಲಿಸಲು ದಲಿತ ಕರ್ನಾಟಕ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
Dalit Karnataka organization appeals to the District Collector to listen to the plight of slum dwel
ವಿಜಯಪುರ 23: ನಗರ ಹಾಗೂ ತಾಲೂಕು ಕೊಳಚೆ ಪ್ರದೇಶಗಳಲ್ಲಿನ ಜನರ ಬೇಡಿಕೆಗಳನ್ನು ಆಲಿಸುವಂತೆ ದಲಿತ ಸ್ವರಾಜ್ಯ ಸೇನೆ- ಕರ್ನಾಟಕ ಸಂಘಟನೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಂಘಟನೆ ಅಧ್ಯಕ್ಷ ಗೌಡಪ್ಪ ಬಡಿಗೇರ ಮಾತನಾಡಿ, ಜಿಲ್ಲೆಯಲ್ಲಿ 38ಅ ಕ್ಕೂ ಹೆಚ್ಚು ಕುಟುಂಬಗಳು ಕೊಳಚೆ ಪ್ರದೇಶಗಳಲ್ಲಿ ಕನಿಷ್ಠ ನಾಗರಿಕ ಸೌಲಭ್ಯಗಳಿಂದಲೂ ವಂಚಿತರಾಗಿ ಬದುಕುತ್ತಿದ್ದಾರೆ. ಇವರುಗಳ ಬದುಕು ನಿತ್ಯ ನರಕವಾಗಿದೆ ಎಂದರು.
ಗೌರವಯುತ ಜೀವನ ಮತ್ತು ಆರೋಗ್ಯಕರ ವಾತಾವರಣ ಪ್ರತಿಯೋರ್ವನ ಹಕ್ಕು. ಸಂವಿಧಾನ ಒದಗಿಸಿದ ಬದುಕುವ ಹಕ್ಕುಗಳನ್ನು ರಕ್ಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದೆವೆ. ಅವರು ಕೂಡ ಸಮಸ್ಯೆ ಆಲಿಸುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಕೊಳಚೆ ನಿವಾಸಿಗಳ ಕುಂದು ಕೊರತೆ ಆಲಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನೂಳಗೊಂಡ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಗಳ ಪಟ್ಟಿ ಮೂಲಕ ಕೋರಿದರು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಅಮೃತ್, ಪರಶುರಾಮ್, ಆದಿತ್ಯ, ಶರಣು, ಸಾಗರ್, ತೌಫಿಕ್, ಕಿರಣ್, ಇಮ್ರಾನ್, ಚನ್ನು, ಸುಭಾಷ್, ಪರಮೇಶ್, ಆನಂದ್, ಬಾಳು, ಗೋಪಾಲ್, ಸದು, ಅರ್ಜುನ್ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 