ಹಿಪ್ಪರಗಿ ಜಲಾಶಯದ 22ನೇ ಗೇಟ್‌ಗೆ ಹಾನಿ: ಅಪಾರ ಪ್ರಮಾಣದ ನೀರು ಪೋಲು
Damage to the 22nd gate of the Hipparagi reservoir: Huge amount of water lost
ಜಮಖಂಡಿ 08: ತಾಲೂಕಿನ ಹಿಪ್ಪರಗಿ ಜಲಾಶಯದ 22ನೇ ಗೇಟ್ ಕಿತ್ತು ಹೋಗಿದ್ದು ಅಪಾರ ಪ್ರಮಾಣದ ನೀರು ನದಿ ಪಾತ್ರದಿಂದ ಹರಿದು ಹೋಗುತ್ತಿದೆ. ಜಲಾಶಯದಲ್ಲಿ 6 ಟಿಎಂಸಿ ನೀರು ಸಂಗ್ರಹವಿದೆ, ಈ ನೀರನ್ನು ಬರುವ ಮಳೆಗಾಲದವರೆಗೆ ಜಮಖಂಡಿ ಮತ್ತಿತರ ನಗರಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಜಲಾಶಯದ ಹಿಂಭಾಗದ ರೈತರ ಜಮಿನುಗಳಿಗೆ ನೀರು ಒದಗಿಸಲು ಬಳಸಲಾಗುತ್ತದೆ. ಆದರೆ 22ನೇ ಗೇಟ್ ಕಳಚಿ ಹೋಗಿರುವದರಿಂದ ಸಂಗ್ರಹವಿದ್ದ ನೀರು ಹರಿದು ಹೋಗಿ ಬೇಸಿಗೆಯಲ್ಲಿ ತೊಂದರೆ ಉಂಟಾಗಬಹುದು ಎಂದು ಆತಂಕ ಮೂಡಿಸಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ತಾಲೂಕಿನ ಹಿಪ್ಪರಗಿ ಜಲಾಶಯದ 22ನೇ ಗೇಟ್ ಕಿತ್ತು ಹೋಗಿದ್ದು ಬ್ಯಾರೇಜ್‌ಗೆ ಭೇಟಿ ನೀಡಿ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಪ್ಪರಗಿ ಜಲಾಶಯದಲ್ಲಿ ಗೇಟ್ ಅಳವಡಿಕೆಯ ಕಾರ್ಯ ಭರದಿಂದ ನಡೆದಿದ.ೆ ಆದಷ್ಟು ಬೇಗನೇ ಗೇಟ್ ಅಳವಡಿಸಲು ಕ್ರಮ ಜರುಗಿಸಲಾಗುತ್ತಿದೆ. ಈ ಕುರಿತು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿದ್ದೇನೆ ಎಂದರು. ಇದೇ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡ ಸಿದ್ದು ಕೊಣ್ಣೂರ ಸೇರಿದಂತೆ ಅನೇಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 