ಎಸ್ಡಿಎಂಸಿಯ ನೂತನ ಅಧ್ಯಕ್ಷರಾಗಿ ದಮ್ಮೂರು ತಿಪ್ಪೇಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ದೊಡ್ಡ ನಿಂಗಪ್ಪ ವಾಲ್ಮೀಕಿ ಆಯ್ಕೆ
Dammur Thippeswamy elected as new SDMC president and Dodda Ningappa Valmiki elected as vice preside
ಕಂಪಿ 24: ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಯಲ್ಲಮ್ಮ ಕ್ಯಾಂಪಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿಯ ನೂತನ ಅಧ್ಯಕ್ಷರಾಗಿ ದಮ್ಮೂರು ತಿಪ್ಪೇಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ದೊಡ್ಡ ನಿಂಗಪ್ಪ ವಾಲ್ಮೀಕಿ ಅವಿರೋಧವಾಗಿ ಆಯ್ಕೆಗೊಂಡರು. ಇಲ್ಲಿನ ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಎಸ್‌ಡಿಎಂಸಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಎಲ್ಲರ ಒಮ್ಮತದಿಂದ ನಡೆಯಿತು. ನಂತರ ಕರವೇ ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಮಾತನಾಡಿ, ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ನಂತರ ನೂತನ ಅಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ, ಶಿಕ್ಷಕರ ಹಾಗೂ ಸದಸ್ಯರ, ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಶಾಲಾ ಅಭಿವೃದ್ಧಿಗೆ ಅಗಲಿರುಳು ಶ್ರಮಿಸುತ್ತೇನೆ ಎಂದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮಾಲಾರೆ್ಣ ಮೂಲಕ ಗೌರವಿಸಿದರು. ಈ ಸಂದರ್ಭದಲ್ಲಿ ಮುಖ್ಯಗುರು ಜೆ.ವೆಂಕೋಬಪ್ಪ, ಸಹಶಿಕ್ಷಕ ಇಮಾಮ್‌ಸಾಬ್, ಮುಖಂಡರಾದ ಪರಶುರಾಮ, ಹುಲುಗಪ್ಪ, ಗಿಣಿ, ಹೊನ್ನುರಸ್ವಾಮಿ, ಬಾಬು, ಹೊನ್ನುರವಲಿ, ಕಜ್ಜಿ ನಾಗಪ್ಪ ವಾಲ್ಮೀಕಿ, ಕುರುಬರ ಚಂದ್ರಶೇಖರ ಸೇರಿದಂತೆ ಮಹಿಳೆಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 