ದಾಂಡೇಲಿ ಅಳ್ನಾವರ ರೈಲು ಸಂಚಾರ ಪುನರಾರಂಭ
Dandeli-Alnavar train service resumes
ದಾಂಡೇಲಿ 06: ದಾಂಡೇಲಿ ಜನರ ಮತ್ತು ಜನಪರ ಸಂಘಟನೆಗಳ ಸತತ ಹೋರಾಟದ ಫಲವಾಗಿ ಸ್ಥಗಿತಗೊಂಡಿದ್ದ ದಾಂಡೇಲಿ ಅಳ್ನಾವರ ರೈಲು ಸಂಚಾರ ಶನಿವಾರ ಪುನರಾರಂಭಗೊಳ್ಳಲಿದೆ. ಕರೋನಾ ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ಸ್ಥಗಿತಗೊಂಡಿದ್ದ ರೈಲು ಕಳೆದ 5 ವರ್ಷಗಳಿಂದ ಸಂಚಾರ ಆರಂಭಿಸಿರಲಿಲ್ಲ. ಶನಿವಾರ ರೈಲ್ವೆ ಹಾಗೂ ಜಲಶಕ್ತಿ ಕೇಂದ್ರ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ದಾಂಡೇಲಿ ಮತ್ತು ಅಳ್ನಾವರ ನಡುವೆ ಸಂಚರಿಸುವ ರೈಲು ಸಂಖ್ಯೆ 07371 (ಡೆಮು) ಸಂಜೆ 3.30 ಕ್ಕೆ ಸ್ಥಳೀಯ ರೈಲ್ವೆ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಿದ್ದಾರೆ.
ಬಹು ವರ್ಷಗಳ ಬೇಡಿಕೆಯಂತೆ ಅಳ್ನಾವರ- ದಾಂಡೇಲಿ ಪ್ರಯಾಣಿಕರ ರೈಲು ಸಂಚಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು ಈ ಭಾಗದ ಜನರ ಕನಸು ನನಸಾಗುತ್ತಿದೆ. ದಾಂಡೇಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸೋದ್ಯಮ ಬೆಳೆದಂತೆ ಪ್ರವಾಸಿಗಳ ಸಂಖ್ಯೆಯೂ ಹೆಚ್ಚುತ್ತಲಿದ್ದು ಅವರ ಅನುಕೂಲಕ್ಕಾಗಿ ಪ್ರಯಾಣಿಕರ ರೈಲು ಪ್ರಾರಂಭಿಸಬೇಕೆನ್ನುವ ಒತ್ತಾಯವನ್ನು ಸ್ಥಳೀಯ ಸಂಘಟನೆಗಳು ಮಾಡುತ್ತಲೆ ಬಂದಿದ್ದವು. ಈಗ ಈ ಬೇಡಿಕೆ ಇಡೇರುತ್ತಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 