ದಾಂಡೇಲಿ ವಿಶ್ವ ಮಹಿಳಾ ದಿನಾಚರಣೆ
Dandeli International Women's Day Celebration
ದಾಂಡೇಲಿ ಮಾ. 8 : ಹಳೇ ದಾಂಡೇಲಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಧಾರವಾಡ ಗ್ರಾಮಾಂತರ ವಿಭಾಗ ದಾಂಡೇಲಿ ಘಟಕ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ದಾಂಡೇಲಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರವಿವಾರ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸ್ಥಳೀಯ ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ತೇಜಸ್ವಿನಿ ಸೊಗಲದ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂದು ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ, ಅರ್ಥವ್ಯವಸ್ಥೆಯ ಬೆಳವಣಿಗೆಯಲ್ಲೂ ಮಹಿಳೆಯರ ಪಾತ್ರ ದಿನೆ ದಿನೆ ಹೆಚ್ಚುತ್ತಿದೆ. ಮಹಿಳೆಯರ ಸಬಲೀಕರಣದ ಬಗ್ಗೆ ಮತ್ತು ಸಮಾನ ಅವಕಾಶಗಳ ಬಗ್ಗೆ ಪರಿಣಾಮಕಾರಿ ಕ್ರಮ ಜರುಗಬೇಕು ಎಂದು ನುಡಿದರು. ವೇದಿಕೆಯ ಮೇಲೆ ಹಿರಿಯ ವಕೀಲರಾದ ರಾಘವೇಂದ್ರ ವಿ. ಗಡೆಪ್ಪನವರ್, ಸಾರಿಗೆ ವ್ಯವಸ್ಥಾಪಕ, ಎ.ಪಿ.ಪಿ ರಮೇಶ ಬಂಕಾಪೂರ ವಕೀಲರಾದ ಕವಿತಾ ಕೆಂಚಪ್ಪನವರ್, ಮತ್ತು ರಾಜ್ಯ ಸಾರಿಗೆ ವಿಭಾಗದ ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 