ದಾವಣಗೆರೆ 24: ರಾಜ್ಯದ ತೀವ್ರ ಬರಪರಿಸ್ಥಿತಿ ಹಿನ್ನಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರ ಜೊತೆಗೆ ಬೆಳೆ ನಷ್ಟ ಸಂತ್ರಸ್ತ ರೈತರ ಪಾಲಿನ ಪರಿಹಾರ ಹಣವನ್ನು ಕೊಡಲೇ ಪಾವತಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೀಡಿದ್ದಾರೆ.
ರಾಜ್ಯದ ಮಳೆ ಬೆಳೆ, ಬರ ಪರಿಸ್ಥಿತಿ ಕುರಿತು ಅವಲೋಕಿಸಲು ಮತ್ತು ಕೈಗೊಳ್ಳಬೇಕಾದ ಪರಿಹಾರ ಕ್ರಮಗಳನ್ನು ಕುರಿತು ಈಗಾಗಲೇ ವಿಧಾನಸೌಧದಲ್ಲಿ ತಮ್ಮ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಸಭೆ ನಡೆಸಿದ ಸಚಿವರು ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಕುರಿತಂತೆ ವಿವರಗಳನ್ನು ನೀಡಿದ್ದಾರೆ.
ಜನ ಹಾಗೂ ಜಾನುವಾರುಗಳಿಗೆ ಯಾವುದೇ ಸಂಧರ್ಭದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾ ವಹಿಸುವುದು. ಹೊಸ ಬೋರ್ವೆಲ್ಗಳನ್ನು ಕೊರೆಯುವ ಬದಲು ಖಾಸಗಿ ಬೋರ್ವೆಲ್ಗಳನ್ನು ಪಡೆಯಲು ಆದ್ಯತೆ ನೀಡುವುದು. ಕುಡಿಯುವ ನೀರಿನ ಬಾಕಿ ಬಿಲ್ಲನ್ನು ಪ್ರತಿ 15 ದಿನಗಳಿಗೊಮ್ಮೆ ಕಡ್ಡಾಯವಾಗಿ ಪಾವತಿಸುವುದು. ಕುಡಿಯುವ ನೀರು ಸರಬರಾಜು ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸುವ ಮೂಲಕ ದುರುಪಯೋಗ ತಡೆಗಟ್ಟುವುದು.
ಮೇವು ಬ್ಯಾಂಕ್ ತೆರೆಯಲು ಆದ್ಯತೆ ನೀಡಲಾಗುವುದು. ಸಕರ್ಾರೇತರ ಸಂಸ್ಥೆಗಳು ಗೋಶಾಲೆ ತೆರೆಯಲು ಮುಂದೆ ಬಂದಲ್ಲಿ ಪ್ರೋ ಹಸಿರು ಮೇವು ಬೆಳೆಸುವ ಸಲುವಾಗಿ ವಿತರಿಸಿದ ಮಿನಿ ಕಿಟ್ನ ಸಮರ್ಪಕ ಬಳಕೆ ಬಗ್ಗೆ ಪರಿಶೀಲಿಸುವುದು. ಜನ ಗುಳೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಸೂಕ್ತ ಉದ್ಯೋಗ ಸೃಜನೆ, ಸಕಾಲಿಕ ವೇತನ ಪಾವತಿ ಸೇರಿದಂತೆ ಎಲ್ಲಾ ಪರಿಹಾರ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿನ ಬ್ಯಾರೇಜ್ ಗೇಟ್ ನಿರ್ವಹಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ 15.00ಲಕ್ಷ ಅನುದಾನ. ಬೆಳೆ ಹಾನಿ ಹೊಂದಿರುವ ಜಮಿನಿನರೈತರು ಮರಣ ಹೊಂದಿದ್ದಲ್ಲಿ ಫಲಾನುಭವಿ ರೈತರ ಸಕ್ಷಮ ವಾರಸುದಾರರಿಗೆ ಇನ್ ಪುಟ್ ಸಬ್ಸಿಡಿ ವಿತರಿಸಲು ಸಂಬಂಧಪಟ್ಟ ತಹಶೀಲ್ದಾರರಿಗೆ ಅಧಿಕಾರ. ಅಲ್ಲದೇ, 2018ರ ಮುಂಗಾರು ಹಂಗಾಮಿನಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ಕೊಡಗು ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿರುವುದನ್ನು ಮನಗಂಡು ಈ ಬಾರಿ ಮುಂಗಾರು ಆರಂಭಕ್ಕೆ ಮುನ್ನವೇ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನಲ್ಲಿ 2 ಸುಸಜ್ಜಿತ ರಾಷ್ಟ್ರೀಯ ವಿಪತ್ತು ಸ್ಪಂದನ ಪಡೆಗಳನ್ನು ನಾಳೆಯಿಂದಲೇ ನಿಯೋಜಿಸಲಾಗುವುದು ಎಂದು ಸಚಿವ ದೇಶಪಾಂಡೆ ತಿಳಿಸಿದ್ದಾರೆ.
ಕೃಷಿ ಇಲಾಖೆಯು ಬಿತ್ತನೆ ಬೀಜ ಗೊಬ್ಬರಗಳನ್ನು ಸಾಕಷ್ಟು ದಾಸ್ತಾನು ಇಟ್ಟುಕೊಂಡು ಮುಂಬರುವ ಮುಂಗಾರು ಹಂಗಾಮಿನಲ್ಲಿ ಸಕಾಲದಲ್ಲಿ ರೈತರಿಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.