ಜಾ.ವಿವಿಯಲ್ಲಿ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಅಹೋರಾತ್ರಿ ಧರಣಿ
Day-and-night protest by temporary assistant professors at Ja. University
ಶಿಗ್ಗಾವಿ 11 : ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು 2024ಹಿ25 ಹಾಗೂ 2025ಹಿ26ನೇ ಶೈಕ್ಷಣಿಕ ವರ್ಷಗಳ 10 ತಿಂಗಳ ಬಾಕಿ ವೇತನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ವಿಶ್ವವಿದ್ಯಾಲಯದ ಆಡಳಿತ ಭವನದ ಎದುರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ತಾಲೂಕಿನ ಗೋಟಗೋಡಿ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನಾ ನಿರತರು ಮಾತನಾಡಿ ವಿದ್ಯಾರ್ಥಿಗಳಿಗೆ ಬೋಧನೆ ನೀಡುವುದರ ಜೊತೆಗೆ ಪರೀಕ್ಷೆಗಳು ಸುಗಮವಾಗಿ ನಡೆಯಲು ಸಂಪೂರ್ಣ ಸಹಕಾರ ನೀಡಿದ್ದೇವೆ. ಆದರೆ, 10 ತಿಂಗಳಿನಿಂದ ವೇತನ ಪಾವತಿಯಾಗದೇ ಕುಟುಂಬ ನಿರ್ವಹಣೆಯೇ ಸಂಕಷ್ಟಕ್ಕೆ ಸಿಲುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಹಲವು ಬಾರಿ ಕುಲಪತಿ, ಕುಲಸಚಿವ ಹಾಗೂ ಸಿಂಡಿಕೇಟ್ ಸದಸ್ಯರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಿಂಡಿಕೇಟ್ ಸದಸ್ಯರು ವೇತನ ಬಿಡುಗಡೆಗೆ ಸೂಚನೆ ನೀಡಿದ್ದರೂ ಆಡಳಿತದಿಂದ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದರು. ಧರಣಿ ಸ್ಥಳಕ್ಕೆ ಭೇಟಿ ನೀಡಿದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಅವರು ಸಮಸ್ಯೆ ಪರಿಹಾರಕ್ಕಾಗಿ ಎರಡು ದಿನಗಳ ಕಾಲಾವಕಾಶ ಕೋರಿದ್ದಾರೆ.
ಆದರೆ, ಬಾಕಿ ವೇತನ ಬಿಡುಗಡೆ ಕುರಿತು ಸ್ಪಷ್ಟ ಆದೇಶ ಹೊರಬರುವವರೆಗೆ ಅಹೋರಾತ್ರಿ ಧರಣಿಯನ್ನು ಮುಂದುವರಿಸಲಾಗುವುದು ಎಂದು ಪ್ರತಿಭಟನಾನಿರತರು ತಿಳಿಸಿದ್ದಾರೆ. ನೌಕರರ ಸಂಘದ ಅಧ್ಯಕ್ಷ ಡಾ. ವೆಂಕನಗೌಡ ಪಾಟೀಲ ಧರಣಿ ನಿರತ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರಿಗೆ ಬೆಂಬಲ ಸೂಚಿಸಿದರು. ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರು ವಿಶ್ವವಿದ್ಯಾಲಯದಲ್ಲೇ ಉಪಸ್ಥಿತರಿದ್ದು ಆಡಳಿತ ನಡೆಸುವ ಬದಲು ಬೇರೆ ಸ್ಥಳದಿಂದಲೇ ಆಡಳಿತ ನಿರ್ವಹಿಸುತ್ತಿರುವುದು ಸರಿಯಲ್ಲ ಎಂದು ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 