ಪೂರ್ವಭಾವಿ ಸಭೆಯಲ್ಲಿ ನಿರ್ಧಾರಸಡಗರ -ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ: ಎಡಿಸಿ ಮಹಮ್ಮದ್ ಝುಬೇ
Decision-makers in preliminary meeting - Karnataka Rajyotsava celebrated with enthusiasm: ADC Moham
ಪೂರ್ವಭಾವಿ ಸಭೆಯಲ್ಲಿ ನಿರ್ಧಾರಸಡಗರ -ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ: ಎಡಿಸಿ ಮಹಮ್ಮದ್ ಝುಬೇ
ಬಳ್ಳಾರಿ 17: ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ.ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಏರಿ್ಡಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ(ಮಾ.ಪು) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪೌರಾಡಳಿತ, ಹಜ್ ಸಚಿವರಾದ ರಹೀಂ ಖಾನ್ ಅವರು ಧ್ವಜಾರೋಹಣ ನೆರವೇರಿಸಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.ವೇದಿಕೆ ಸಿದ್ದತೆ, ಆಹ್ವಾನ ಪತ್ರಿಕೆ ಮುದ್ರಣ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಅದರಂತೆ ಅಂದು ಹಂಪಿಯಿಂದ ಜ್ಯೋತಿ ದೀಪ ತರಲಾಗುವುದು. ಬಳಿಕ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳ ಮೆರವಣಿಗೆ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ವಿದ್ಯುತ್ ಅವಘಡ ಸಂಭವಿಸಿದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸನ್ಮಾನಿಸಲಾಗುವುದು. ನಗರದ ನಗರದಲ್ಲಿ ಸ್ವಚ್ಛತೆ, ಪ್ರಮುಖ ವೃತ್ತ ಮತ್ತು ರಸ್ತೆಗಳನ್ನು ದೀಪಾಲಂಕಾರದಿಂದ ಅಲಂಕೃತಗೊಳಿಸಬೇಕು. ನವೆಂಬರ್ ತಿಂಗಳ ಮೊದಲ ಒಂದು ವಾರದ ಕಾಲ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸಬೇಕು ಎಂದರಲ್ಲದೇ, ಈ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಗೆ ಈ ಬಾರಿ ಆಯೋಜಿಸಲಾಗುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಸ್ವಾಗತಿಸಲು, ವಿವಿಧ ಶಾಲಾ-ಕಾಲೇಜು 1 ಲಕ್ಷ ವಿದ್ಯಾರ್ಥಿಗಳ ಮೂಲಕ ನಾಡಗೀತೆ ಹೇಳುವ ಮೂಲಕ ಕನ್ನಡದ ಕಲರವ ಮೊಳಗಬೇಕು. ರಾಜ್ಯೋತ್ಸವದ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಭಾಷಣ, ಪ್ರಬಂಧ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಸೇರಿದಂತೆ ಡಿಡಿಪಿಐ, ಡಿಡಿಪಿಯು, ಲೋಕೋಪಯೋಗಿ, ಜೆಸ್ಕಾಂ ಅಧಿಕಾರಿಗಳು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷಕರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 