23ರಂದು ಶ್ರೀಕೃಷ್ಣ ಜಯಂತಿ ಆಚರಣೆಗೆ ನಿರ್ಧಾರ: ಅಪರ ಜಿಲ್ಲಾಧಿಕಾರಿ ಸೈಯದಾ

ಕೊಪ್ಪಳ 07: ಆಗಸ್ಟ್. 23 ರಂದು ಶ್ರೀಕೃಷ್ಣ ಜಯಂತಿಯನ್ನು ವಿಜೃಂಭಣೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ ಅವರು ಹೇಳಿದರು.

ಶ್ರೀಕೃಷ್ಣ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಶ್ರೀಕೃಷ್ಣ ಜಯಂತಿ ಆಚರಣೆಯನ್ನು ಆಗಸ್ಟ್. 23ರಂದು ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ಆಯೋಜಿಸಲಾಗುವುದು. ಬೆಳಿಗ್ಗೆ 10:00 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಏರ್ಪಡಿಸಲಾಗುವುದು.  ಕಾರ್ಯಕ್ರಮದಲ್ಲಿ ಶ್ರೀಕೃಷ್ಣನ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.  ವೇದಿಕೆ ಕಾರ್ಯಕ್ರಮದ ಬಳಿಕ  ಶ್ರೀಕೃಷ್ಣ ಭಾವಚಿತ್ರದೊಂದಿಗೆ ಮೆರವಣಿಗೆ ಪ್ರಾರಂಭವಾಗಲಿದ್ದು, ಮೆರವಣಿಗೆಯು ಅಶೋಕ ವೃತ್ತದಿಂದ ಜವಾಹರ್ ರಸ್ತೆ ಮೂಲಕವಾಗಿ ಗಡಿಯಾರ ಕಂಬ ಮಾರ್ಗವಾಗಿ ಗೋಪಾಲಕೃಷ್ಣ ದೇವಸ್ಥಾನದವರೆಗೆ ಸಾಗಲಿದೆ.  ಮೆರವಣಿಗೆಯಲ್ಲಿ ಎರಡು ವಿಶೇಷ ಕಲಾ ತಂಡಗಳನ್ನು ಆಯ್ಕೆ ಮಾಡಿ ಮೆರವಣಿಗೆಯನ್ನು ಆಕರ್ಷಕಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.  ಶ್ರೀಕೃಷ್ಣ ಜಯಂತಿ ಆಚರಣೆ ಕಾರ್ಯಕ್ರಮ ದಿನದಂದು, ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೊಪ್ಪಳ ನಗರಸಭೆಯವರು ಕೈಗೊಳ್ಳಬೇಕು.  ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾದಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.   ಕಾರ್ಯಕ್ರಮದಲ್ಲಿ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು. 

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಸಿದ್ದಲಿಂಗೇಶ ರಂಗಣ್ಣನವರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂತರ್ಿ ದೇಸಾಯಿ, ಕೊಪ್ಪಳ ತಹಶೀಲ್ದಾರ ಜೆ.ಬಿ. ಮಜ್ಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರಾದ ಜಗನ್ನಾಥ ಹುಲಿಗಿ, ಯಮನೂರ ಬಂಗ್ಲೆರ್, ವೆಂಕಣ್ಣ ಬಂಡ್ಲಿ, ವೆಂಕಟೇಶ ಬಂಡ್ಲಿ, ಮಾರುತಿ ಕಟಗಾಲಿ, ಪ್ರಾಣೇಶ ಪೂಜಾರ, ನಾಗರಾಜ ವಾಲಿಕಾರ ಮತ್ತಿತರರು ಭಾಗವಹಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.